ಆಂಧ್ರದಲ್ಲಿ ಗುಲಾಬ್ ಚಂಡಮಾರುತ ಭೀತಿ

ಭಾನುವಾರ, 26 ಸೆಪ್ಟಂಬರ್ 2021 (17:02 IST)
ಆಂಧ್ದರದಲ್ಲಿ ಗುಲಾಬ್ ಚಂಡಮಾರುತದ ಭೀತಿ ಎದುರಾಗಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ.  ಇಂದು ಸಂಜೆ ವೇಳೆಗೆ ಅಂಧ್ರದ ಕಳಿಂಗಪಟ್ಟಣಂನಲ್ಲಿ ಸುಮಾರು70-80 ಕೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ . ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.  ಅಲ್ಲದೇ ಆಂಧ್ರದಲ್ಲಿ ಇನ್ನೂ ಮೂರ್ನಾಲ್ಕು ದಿನ ಹೆಚ್ಚು ಮಳೆಯಾಗವ ಸಾಧ್ಯತೆ ಇದೆ.. ದಕ್ಷಿಣ ಒಡಿಶಾ ಕರಾವಳಿ ಪ್ರದೇಶಗಳಲ್ಲೂ ಗುಲಾಬ್ ಚಂಡಮಾರುತ ಪ್ರಭಾವ ಬೀರುವ ಸಾಧ್ಯತೆ ಇದ್ದು, ಈಗಾಗಲೇ ರಾಜ್ಯದ 7 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನು ನದಿ ತೀರದ ಜನರು ಸುರಕ್ಷಿತವಾಗಿರುವಂತೆ ಎಚ್ಚರಿಕೆ ನೀಡಲಾಗಿದೆ. ಕೆಲ ಪ್ರದೇಶದ ಜನರನ್ನು ಸ್ಥಳಾಂತರ ಮಾಡಲಾಗಿದೆ. ಇನ್ನು ಕರ್ನಾಟಕದ ಕರಾವಳಿ ಭಾಗದಲ್ಲೂ ಹೆಚ್ಚು ಮಳೆಯಾಗುವ ಮುನ್ಯೂಚನೆ ನೀಡಿದ್ದಾರೆ. ಗುಲಾಬ್ ಚಂಡಾಮಾರುತದ ಪರಿಣಾಮ ಬೆಂಗಳೂರಿನಲ್ಲೂ ಮಳೆಯಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ