ಒಡಿಶಾದತ್ತ ‘ಅಸಾನಿ’ ಚಂಡಮಾರುತ
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಅಸಾನಿ ಚಂಡಮಾರುತ ಭೀಕರವಾಗಿ ಮಾರ್ಪಟ್ಟಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಭಾರೀ ಎಚ್ಚರಿಕೆ ನೀಡಿದೆ. ಈ ಚಂಡಮಾರುತ ಮುಂದಿನ 6 ಗಂಟೆಗಳಲ್ಲಿ ತನ್ನ ಗಂಭೀರ ಪರಿಣಾಮಗಳನ್ನು ತೋರಿಸಲಿದೆ.. ಉತ್ತರ-ಈಶಾನ್ಯಕ್ಕೆ ತಿರುಗುವ ಸಾಧ್ಯತೆಯಿದೆ ಮತ್ತು ಒಡಿಶಾ ಕರಾವಳಿಯಿಂದ ಬಂಗಾಳ ಕೊಲ್ಲಿಯಲ್ಲಿ ವಾಯುವ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಎನ್ನಲಾಗ್ತಿದೆ..ಕಳೆದ 6 ಗಂಟೆಗಳಲ್ಲಿ ಈ ಚಂಡಮಾರುತವು ವಾಯುವ್ಯ ದಿಕ್ಕಿನಲ್ಲಿ ಗಂಟೆಗೆ 14 ಕಿ.ಮೀ ವೇಗದಲ್ಲಿ ಚಲಿಸುತ್ತಿದೆ. ಇದು ತೀವ್ರ ಚಂಡಮಾರುತವಾಗಿ ಪರಿವರ್ತನೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳಲ್ಲಿ ಎಚ್ಚರಿಕೆ ನೀಡಲಾಗಿದೆ. ಚಂಡಮಾರುತದಿಂದಾಗಿ ಉತ್ತರ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ನಾಳೆಯಿಂದ ಬಲವಾದ ಗಾಳಿ ಮತ್ತು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.