ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು ನೋಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

ಸೋಮವಾರ, 21 ಫೆಬ್ರವರಿ 2022 (09:50 IST)
ಕೊಡಗು: ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದುದನ್ನು ನೋಡಿ ಶಾಕ್ ಗೊಳಗಾದ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗಿನಲ್ಲಿ ನಡೆದಿದೆ.

22 ವರ್ಷದ ಪತ್ನಿ ಶಿಲ್ಪಾ ಮೊದಲು ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ಮನೆಯಲ್ಲಿ ಪತಿ ಇರಲಿಲ್ಲ. ಪತಿ ಮನೆಗೆ ಬಂದು ನೋಡಿದಾಗ ಪತ್ನಿ ಶವ ಕಂಡುಬಂದಿದೆ.

ಇದರಿಂದ ಶಾಕ್ ಗೊಳಗಾದ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದೀಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ