ಸಾವಿನಲ್ಲೂ ಒಂದಾದ ಪ್ರೇಮಿಗಳು

ಬುಧವಾರ, 22 ಜೂನ್ 2016 (10:04 IST)
ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಸಾವಿನಿ೦ದ ಆಘಾತಕ್ಕೊಳಗಾದ ಪತಿ ನೇಣು ಹಾಕಿಕೊ೦ಡು ಆತ್ಮಹತ್ಯೆ ಮಾಡಿಕೊ೦ಡಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. 
ಮೃತ ಹೆಣ್ಣೂರು ಸಮೀಪದ ಅಶ್ವತ್ಥನಗರ ನಿವಾಸಿ ರಾಘವೇ೦ದ್ರ (25) ಎಂದು ಗುರುತಿಸಲಾಗಿದ್ದು ಮಕ್ಕಳಾಗಲಿಲ್ಲ ಎಂಬ ಕೊರಗಿನಿಂದ ಈತನ ಪತ್ನಿ ಮೂರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊ೦ಡಿದ್ದಳು. 
 
ಅವಳ ಅಗಲಿಕೆಯನ್ನು ಸಹಿಸಲಾಗದೆ ಮಾನಸಿಕವಾಗಿ ಜರ್ಜರಿತನಾಗಿದ್ದ ರಾಘವೇಂದ್ರ ಸೋಮವಾರ ರಾತ್ರಿ ನೇಣಿಗೆ ಶರಣಾಗಿದ್ದಾನೆ.
 
ಭದ್ರಾವತಿ ಮೂಲದ ರಾಘವೇ೦ದ್ರ ನಾಲ್ಕು ವರ್ಷದ ಹಿಂದೆ ರಾಧಿಕಾಳನ್ನು ಪ್ರೀತಿಸಿ ಮದುವೆಯಾಗಿದ್ದ. ಆಕೆಯ ಸಾವಿನ ಬಳಿಕ ಖಿನ್ನತೆಗೆ ಜಾರಿದ್ದ ಆತನನ್ನು ಪೋಷಕರು ತಮ್ಮೂರಿಗೆ ಕರೆದುಕೊಂಡು ಹೋಗಿದ್ದರು. ಸೋಮವಾರ ಶಿವಮೊಗ್ಗಕ್ಕೆ ಹೋಗಿ ಬರುವುದಾಗಿ ಹೇಳಿ ಹೊರಟ ಆತ ನಗರಕ್ಕೆ ಬಂದು ತಾನು ವಾಸವಾಗಿದ್ದ ಬಾಡಿಗೆ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ. 
 
ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ