ಗಂಡ ನಪುಂಸಕ ಎಂದ್ರೆ ಕ್ರೌರ್ಯ : ಹೈ ಕೋರ್ಟ್

ಗುರುವಾರ, 16 ಜೂನ್ 2022 (13:46 IST)
ಬೆಂಗಳೂರು : ನಿರಾಧಾರವಾಗಿ ಪತಿ ವಿರುದ್ಧ ನಪುಂಸಕತ್ವದ ಆರೋಪ ಹೊರಿಸುವುದು ‘ಮಾನಸಿಕ ಕ್ರೌರ್ಯ’ ಎಂದು ವ್ಯಾಖ್ಯಾನಿಸಿರುವ ಹೈಕೋರ್ಟ್,  ಅದನ್ನು ಆಧರಿಸಿ ಪತಿ ವಿಚ್ಚೇದನ ಕೋರಬಹುದು ಎಂದು ಆದೇಶಿಸಿದೆ.
 
ಅಲ್ಲದೆ, ಪ್ರಕರಣವೊಂದರಲ್ಲಿ ಪತಿಯ ವಿರುದ್ಧ ಆಧಾರರಹಿತವಾಗಿ ನಪುಂಸಕತ್ವದ ಆರೋಪ ಹೊರಿಸಿದ ಪತ್ನಿಯ ನಡೆಯನ್ನು ಆಕ್ಷೇಪಿಸಿ, ವಿಚ್ಚೇದನ ಮಂಜೂರು ಮಾಡಿದೆ.

ಸಾಕ್ಷ್ಯಧಾರವಿಲ್ಲದೆ ಪತ್ನಿ ನಪುಂಸಕತ್ವದ ಆರೋಪ ಹೊರಿಸಿ ಘನತೆಗೆ ಧಕ್ಕೆ ತಂದರೂ ವಿಚ್ಚೇದನ ಮಂಜೂರಾತಿ ಮಾಡಲು ನಿರಾಕರಿಸಿದ ಧಾರವಾಡದ ಪ್ರಧಾನ ಕೌಟುಂಬಿಕ ನ್ಯಾಯಾಲಯದ ಕ್ರಮ ರದ್ದುಪಡಿಸುವಂತೆ ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿಯನ್ನು  ಪುರಸ್ಕರಿಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.

ಧಾರವಾಡದ ರಾಜು ಮತ್ತು ಹಾವೇರಿಯ ರಮ್ಯಾ (ಹೆಸರು ಬದಲಿಸಲಾಗಿದೆ) ಅವರು 2013ರ ಮೇ 13ರಂದು ವಿವಾಹವಾಗಿದ್ದರು. ಕೆಲ ತಿಂಗಳ ನಂತರ ಧಾರವಾಡ ಪ್ರಧಾನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ರಾಜು, ಮದುವೆಯಾದ ಒಂದು ತಿಂಗಳವರೆಗೂ ಪತ್ನಿ ವೈವಾಹಿಕ ಜೀವನಕ್ಕೆ ಅಗತ್ಯ ಸಹಕಾರ ನೀಡುತ್ತಿದ್ದರು.

ಇದರಿಂದ ನನಗೆ ತುಂಬಾ ಮುಜುಗರ ಉಂಟಾಗುತ್ತಿತ್ತು. ಪತ್ನಿ ಈ ನಡೆಯಿಂದ ಮಾನಸಿಕ ಹಿಂಸೆ  ಉಂಟಾಗುತ್ತಿದ್ದು, ವಿಚ್ಚೇದನ ಮಂಜೂರು ಮಾಡಬೇಕು ಎಂದು ಕೋರಿದ್ದರು. ಆದರೆ, ರಾಜು ಅವರ ಮನವಿಯನ್ನು ೨೦೧೫ರ ಜು.೧೭ರಂದು ಧಾರವಾಡ ಪ್ರಧಾನ ಕೌಟುಂಬಿಕ ನ್ಯಾಯಾಲಯ ತಿರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿ ರಾಜು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.

ರಾಜು ಅವರ ವಾದವನ್ನು ಆಕ್ಷೇಪಿಸಿದ್ದ ರಮ್ಯಾ, ಗಂಡನ ಮನೆಗೆ ತೆರಳಿ ಸಂತೋಷಕರವಾದ ಜೀವನ ನಡೆಸುತ್ತಿದ್ದೆ. ಆದರೆ, ಗಂಡನೇ ತನ್ನಿಂದ ಅಂತರ ಕಾಯ್ದುಕೊಳ್ಳುತ್ತಿದ್ದರು. ಇದರಿಂದ ವೈವಾಹಿಕ ಜೀವನದಲ್ಲಿ ಸುಖ ಮತ್ತು ನೆಮ್ಮದಿ ಇಲ್ಲದಂತಾಯಿತು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪತಿ ವೈವಾಹಿಕ ಜೀವನದ ಜವಾಬ್ದಾರಿ ನಿರ್ವಹಿಸುತ್ತಿಲ್ಲ. ಲೈಂಗಿಕ ಕ್ರಿಯೆಗೆ ನಡೆಸಲು ಅಸಮರ್ಥ ಎಂಬುದಾಗಿ ಪತ್ನಿ ಆರೋಪ ಮಾಡಿದ್ದಾರೆ. ಆದರೆ, ಈ ಆರೋಪವು ಸತ್ಯವೆಂದು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಧಾರ ಒದಗಿಸಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ