ನದಿಯಲ್ಲಿ ಮುಳುಗಿಸಿ ಗರ್ಭಿಣಿ ಪತ್ನಿಯ ಕೊಂದ ಪತಿ

ಶುಕ್ರವಾರ, 17 ಡಿಸೆಂಬರ್ 2021 (08:50 IST)
ಮೈಸೂರು: 5 ತಿಂಗಳ ಗರ್ಭಿಣಿ ಪತ್ನಿಯನ್ನು ನದಿಯಲ್ಲಿ ಮುಳುಗಿಸಿ ಪತಿಯೇ ಕೊಲೆಗೈದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
 

ಗರ್ಭಿಣಿ ಪತ್ನಿ ಮತ್ತು ಮಕ್ಕಳನ್ನು ಕಪಿಲಾ ನದಿಗೆ ಕರೆದೊಯ್ದ ಪತಿ ಕೊಲೆಗೆ ಸಂಚು ರೂಪಿಸಿದ್ದ. ಆದರೆ ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಆದರೆ ಗರ್ಭಿಣಿ ಪತ್ನಿಯನ್ನು ರಕ್ಷಿಸುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿ ಪತಿಯನ್ನು ಬಂಧಿಸಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ