ಪತ್ನಿ ಕೊಂದು ಪತಿಯೂ ಆತ್ಮಹತ್ಯೆ

ಸೋಮವಾರ, 21 ಮಾರ್ಚ್ 2022 (10:00 IST)
ಬೆಂಗಳೂರು: ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನು ಕೊಂದ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

26 ವರ್ಷದ ಮಹಿಳೆ ಕೊಲೆಗೀಡಾಗಿದ್ದಾಳೆ. ಪತಿ-ಪತ್ನಿ ನಡುವೆ ಕೌಟುಂಬಿಕ ಕಲಹವಿತ್ತು. ಈ ಬಗ್ಗೆ ಹಿರಿಯರ ಸಮ್ಮುಖದಲ್ಲಿ ರಾಜೀ ಸಂಧಾನವೂ ನಡೆದಿತ್ತು. ಆದರೆ ಪ್ರಯೋಜನವಾಗಿರಲಿಲ್ಲ.

ರಾಜೀ ಸಂಧಾನದ ಕೆಲವೇ ಕ್ಷಣಗಳಲ್ಲಿ ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ