ಪತ್ನಿಯನ್ನು ಸ್ನೇಹಿತನೊಂದಿಗೆ ಹಂಚಿಕೊಳ್ಳಲು ಮುಂದಾದ ಪತಿ

ಗುರುವಾರ, 17 ಡಿಸೆಂಬರ್ 2020 (06:46 IST)
ಅಹಮದಾಬಾದ್ : ತನ್ನ ಸ್ನೇಹಿತನೊಡನೆ ಹೆಂಡತಿಯನ್ನು ಬದಲಾಯಿಸುವ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಒತ್ತಾಯಿಸುತ್ತಿದ್ದ ಪತಿಯ ವಿರುದ್ಧ  ಪತ್ನಿ ಪೊಲೀಸರಿಗೆ ದೂರು ನೀಡಿದ ಘಟನೆ ಅಹಮದಾಬಾದ್ ನಲ್ಲಿ ನಡೆದಿದೆ.

ಪತಿ ಬೇರೊಬ್ಬ ಮಹಿಳೆಯ ಜೊತೆ ಸಂಬಂಧ ಹೊಂದಿರುವುದನ್ನು ಸಂತ್ರಸ್ತ ಮಹಿಳೆ ತಿಳಿದುಕೊಂಡಿದ್ದಾಳೆ. ಹಾಗಾಗಿ ಪತಿ ಅವಳ ಮೇಲೆ ದೌರ್ಜನ್ಯ ಎಸಗಿ ತನ್ನ ಸ್ನೇಹಿತರೊಡನೆ ಹಂಚಿಕೊಳ್ಳುವ ವ್ಯವಸ್ಥೆಗೆ ಮುಂದಾಗಿದ್ದಾನೆ. ಅದಕ್ಕಾಗಿ ಆಕೆಯ ಮೇಲೆ ಒತ್ತಡ ಹೇರುತ್ತಿದ್ದನು.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ