ಪತಿ ಪತ್ನಿ ಜಗಳ ಕೊಲೆಯಲ್ಲಿ ಅಂತ್ಯ

ಗುರುವಾರ, 7 ಜುಲೈ 2022 (14:03 IST)
ವ್ಯಕ್ತಿಯೊಬ್ಬ ಮಕ್ಕಳ ಮುಂದೆಯೇ ತನ್ನ ಪತ್ನಿಯನ್ನು ಅಮಾನುಷವಾಗಿ ಕೊಲೆ ಮಾಡಿರುವ ಆತಂಕಕಾರಿ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗೆಂಡೆಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
 
ಯೋಗಿತಾ (27) ಗಂಡನಿಂದಲೇ ಕೊಲೆಯಾದ ಮಹಿಳೆ. ರವಿ ಮಕ್ಕಳ ಮುಂದೆಯೇ ಪತ್ನಿ ಕೊಲೆ ಮಾಡಿದ  ಪತಿ.
ಪರಸ್ತ್ರೀ ಜೊತೆ ರವಿಗೆ ಅನೈತಿಕ ಸಂಬಂಧ ಇತ್ತು. ಇದು ಪತ್ನಿಗೂ ತಿಳಿದಿತ್ತು. ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಮನೆ ಬಿಟ್ಟು ಹೋಗುವಂತೆ ಪತ್ನಿಗೆ ಪದೇಪದೆ ರವಿ ಹಿಂಸೆ ನೀಡುತ್ತಿದ್ದ ಎಂದು ಹೇಳಲಾಗಿದೆ.
ಪತಿ-ಪತ್ನಿ ನಡುವಿನ ಜಗಳ ಸಂಬಂಧ ಸಾಕಷ್ಟು ಬಾರಿ ಗ್ರಾಮದ ಮುಖಂಡರು ನ್ಯಾಯ ಪಂಚಾಯಿತಿಯನ್ನು ನಡೆಸಿದ್ದರು. ಆದರೂ ಜಗಳ ಮಾತ್ರ ನಿಂತಿರಲಿಲ್ಲ. ನಿನ್ನೆ ರಾತ್ರಿಯೂ ಗಂಡ ಹೆಂಡತಿ ನಡುವೆ ಮತ್ತೆ ಜಗಳ ಆರಂಭವಾಗಿತ್ತು. ಆರೋಪಿ ರವಿ ಮಕ್ಕಳಿಗೆ ಪಾನಿಪುರಿ ತಿನಿಸುತ್ತಿದ್ದ ವೇಳೆ ಜಗಳ ಶುರುವಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ