ನೀವು ಹೊರ ರಾಜ್ಯಗಳಿಂದ ಬಂದಿದ್ದರೆ ಹುಷಾರ್
ದೇಶದ ಯಾವುದೇ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ತಪ್ಪದೇ ಇದನ್ನು ಪಾಲಿಸಬೇಕು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ , ದೇಶದ ಯಾವುದೇ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಸಹ ಮುಂಜಾಗ್ರತಾ ಕ್ರಮವಾಗಿ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಬೇಕು.
ಈ ಸೌಲಭ್ಯಕ್ಕಾಗಿ ಶಾಲೆ, ಹಾಸ್ಟೆಲ್, ಕಲ್ಯಾಣ ಮಂಟಪಗಳಂತಹ ಕಟ್ಟಡ ಗುರುತಿಸಲಾಗಿದೆ. ಸ್ವತಃ ವೆಚ್ಚ ಭರಿಸಲು ಸಿದ್ಧ ಇರುವವರಿಗೆ ಹೋಟೆಲ್ ಗಳಲ್ಲಿಯೂ ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದಿದ್ದಾರೆ.