ನಾನು ಕೂಡಾ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ: ರಮೇಶ್ ಕುಮಾರ್

ಶುಕ್ರವಾರ, 19 ಮೇ 2017 (15:20 IST)
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೊಣೆಯನ್ನು ಹೈಕಮಾಂಡ್ ನನಗೆ ನೀಡಿದಲ್ಲಿ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ.
 
ನಾನು ಕೂಡಾ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು, ಅಧ್ಯಕ್ಷ ಸ್ಥಾನ ಕೊಟ್ಟರೆ ನಿರ್ವಹಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಹಲವು ಹಿರಿಯ ಮುಖಂಡರಿದ್ದಾರೆ. ಹೈಕಮಾಂಡ್ ಒಪ್ಪುವ ಅಭ್ಯರ್ಥಿಯನ್ನು ನಾವು ಬೆಂಬಲಿಸುತ್ತೆವೆ. ಯಾವುದೇ ವಿರೋಧವಿಲ್ಲ. ಆದರೆ, ನಮ್ಮ ಮನಸ್ಸಿನಲ್ಲಿರುವುದನ್ನು ಹೈಕಮಾಂಡ್ ಮುಂದೆ ತಿಳಿಸುವುದು ಅಗತ್ಯವಾಗಿತ್ತು ಎಂದರು.
 
ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ್ ಸೇರಿದಂತೆ ಇತರರು ಕೂಡಾ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಅಧ್ಯಕ್ಷ ಸ್ಥಾನ ಯಾರಿಗೆ ದೊರೆಯಲಿದೆ ಎನ್ನುವುದನ್ನು ಕಾದುನೋಡಬೇಕಾಗಿದೆ ಎಂದು ಸಚಿವ ರಮೇಶ್ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ