‘ಬೆಳಗಾವಿಗೆ ಬರುತ್ತಿದ್ದೇನೆ, ಭದ್ರತೆ ಕೊಡಿ-ಅಮಿತ್ ಶಾ

ಭಾನುವಾರ, 18 ಡಿಸೆಂಬರ್ 2022 (17:05 IST)
ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಶುರುವಾಗುತ್ತಿದೆ. ಈ ಹಿನ್ನೆಲೆ ಮಹಾರಾಷ್ಟ್ರ ಶಿವಸೇನೆ ಸಂಸದ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸಕ್ಕೆ ಮುಂದಾಗಿದ್ದಾರೆ. ಕೇಂದ್ರ ಗೃಹ ಸಚಿವರ ಹೇಳಿಕೆ ಬಳಿಕವೂ ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ ಮಾನೆ ಬೆಳಗಾವಿಗೆ ಬರುವುದಾಗಿ ಪತ್ರ ಬರೆದಿದ್ದಾರೆ. ಎಂಇಎಸ್​ ಮಹಾಮೇಳಾವ್​ಗೆ ಬರುತ್ತಿದ್ದೇನೆ. ಸೂಕ್ತ ಭದ್ರತೆ ನೀಡುವಂತೆ ಸಂಸದ ಧೈರ್ಯಶೀಲ ಮಾನೆ ಬೆಳಗಾವಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಮಹಾಮೇಳಾವ್​ಗೆ ಅನುಮತಿ ನೀಡದಂತೆ ಕನ್ನಡ ಸಂಘಟನೆಗಳು ಆಗ್ರಹಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಕರ್ನಾಟಕ-ಮಹಾರಾಷ್ಟ್ರ ಸಿಎಂಗಳ ಜತೆಗೆ ಸಭೆ ನಡೆದಿತ್ತು. ಸಭೆಯಲ್ಲಿ ಗಡಿ ವಿವಾದ ಶಮನ ಮಾಡುವ ಯತ್ನ ನಡೆದಿತ್ತು. ಸುಪ್ರೀಂಕೋರ್ಟ್ ತೀರ್ಪು ಬರುವವರೆಗೂ ಎರಡು ರಾಜ್ಯ ಶಾಂತಿ ಕಾಪಾಡುವಂತೆ ನಿರ್ದೇಶನ ನೀಡಿದ್ದರು. ಅಮಿತ್ ಶಾ ನಿರ್ದೇಶನದ ಬಳಿಕವೂ ಮಹಾರಾಷ್ಟ್ರ ನಾಯಕರ ಉದ್ಧಟತನ ಮೆರೆಯುತ್ತಿದ್ದಾರೆ. ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ ಮಾನೆ ಬೆಳಗಾವಿ ಜಿಲ್ಲಾ ಪ್ರವಾಸಕ್ಕೆ ಮುಂದಾಗಿದ್ದಾರೆ.

ವೆಬ್ದುನಿಯಾವನ್ನು ಓದಿ