ಸುಪ್ರೀಂ ಕೋರ್ಟ್ ನಲ್ಲಿ ಇಂದು ಅನರ್ಹ ಶಾಸಕರ ತೀರ್ಪು ಪ್ರಕಟವಾಗಿದ್ದು, ಸ್ಪೀಕರ್ ಆದೇಶವನ್ನು ಎತ್ತಿ ಹಿಡಿದ ಕೋರ್ಟ್ ಅನರ್ಹರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನೀಡಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಕುಮಾರ್, ಸುಪ್ರೀಂಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಉಪಚುನಾವಣೆಯಲ್ಲಿ ಸ್ಪರ್ಧೆಗೆ ಸುಪ್ರೀಂ ಒಪ್ಪಿಗೆ ನೀಡಿದೆ. ಇದು ಜನತಾ ನ್ಯಾಯಾಲಯದಲ್ಲಿ ತೀರ್ಮಾನವಾಗಬೇಕಿದೆ. ನನ್ನ ತೀರ್ಪನ್ನು ಸುಪ್ರೀಂ ಎತ್ತಿ ಹಿಡಿದಿರುವುದು ಖುಷಿ ತಂದಿದೆ ಎಂದು ತಿಳಿಸಿದ್ದಾರೆ.