ನಾನೊಬ್ಬ ಬ್ಲಾಕ್ ಹಾರ್ಸ್ ಇದ್ದಂಗೆ. ಕೆಪಿಸಿಸಿ ಅಧ್ಯಕ್ಷನಾಗಿ ಮುಂದುವರಿಯುವಂತೆ ಹೈಕಮಾಂಡ್ ಆದೇಶ ನೀಡಿದಲ್ಲಿ ಮುಂದುವರಿಯುತ್ತೇನೆ. ಬೇರೆಯವರಿಗೆ ಕೊಡಿ ಎಂದರೆ ಬಿಟ್ಟುಕೊಡುತ್ತೇನೆ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಕೆಪಿಸಿಸಿ ಅಧ್ಯಕ್ಷರಾಗುವ ಪ್ರಬಲ ಆಕಾಂಕ್ಷಿಗಳಿದ್ದಾರೆ. ಯಾರು ಬೇಕಾದರೂ ಕೆಪಿಸಿಸಿ ಅಧ್ಯಕ್ಷರಾಗಬಹುದು ಎಂದು ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕುರಿತಂತೆ ಮಧುಗಿರಿ ಕ್ಷೇತ್ರದ ಶಾಸಕ ಸುದ್ದಿಗೋಷ್ಠಿ ನಡೆಸಿ ಪರಮೇಶ್ವರ್ ಅವರೇ ಮುಂದುವರಿಯಬೇಕು ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ಇದೀಗ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತಂತೆ ಹೊಸ ಸಂಚಲನ ಮೂಡಿಸಿದೆ.
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಕೂಡಾ ಕೆಪಿಸಿಸಿ ಅಧ್ಯಕ್ಷರಾಗುವ ಬಗ್ಗೆ ಆಸಕ್ತಿ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.