ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ: ಈಶ್ವರಪ್ಪ ತಿರುಗೇಟು
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನಲೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಪಟ್ಟು ಹಿಡಿದಿದ್ದಾರೆ.
ಶಿವಮೊಗ್ಗದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ದಾಖಲೆ ಇಲ್ಲದೇ ನನ್ನ ಮೇಲೆ ಆರೋಪ ಮಾಡಿ ರಾಜೀನಾಮೆ ಕೇಳುವುದನ್ನು ಒಪ್ಪಲು ಸಾಧ್ಯವಿಲ್ಲ. ಕಾಂಗ್ರೆಸ್ ನವರ ಆರೋಪಗಳಿಗೆ ಬಗ್ಗಲ್ಲ ಎಂದರು.
ನನ್ನ ಮೇಲೆ ಆರೋಪಕ್ಕೆ ಒಂದು ದಾಖಲೆಯೂ ಇಲ್ಲ. ಕಾಂಗ್ರೆಸ್ ನವರು ಮೊದಲಿನಿಂದಲೂ ನಾನು ರಾಜೀನಾಮೆ ಕೇಳುತ್ತಲೇ ಇದ್ದಾರೆ. ಆದರೆ ಶೀಘ್ರದಲ್ಲೇ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಘಟನೆಯನ್ನು ವಿವರಿಸಲಿದ್ದೇನೆ ಎಂದು ಅವರು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರಿಂದ ಮಾಹಿತಿ ನೀಡಿದ್ದೇನೆ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.