ನಾನು ರಾಜ್ಯ ರಾಜಕಾರಣಕ್ಕೆ ಬರೋಲ್ಲ

ಸೋಮವಾರ, 23 ಅಕ್ಟೋಬರ್ 2023 (15:46 IST)
ನಾನು ಯಾವುದೇ ಕಾರಣಕ್ಕೂ ರಾಜ್ಯ ರಾಜಕಾರಣಕ್ಕೆ ಬರಲ್ಲ ಅಂತಾ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಕೇಂದ್ರ ಸಚಿವೆಯಾಗಿ ಖುಷಿಯಾಗಿದ್ದೇನೆ. ರಾಜ್ಯ ರಾಜಕಾರಣಕ್ಕೆ ಯಾವುದೇ ಕಾರಣಕ್ಕೂ ಬರಲ್ಲ . ಈ ಭಾರಿ ಮೋದಿ ನೇತೃತ್ವದ ಸರ್ಕಾರ ಮತ್ತೆ ಬರಲೆಂದು ದೇವರಲ್ಲಿ ಕೇಳಿಕೊಂಡಿದ್ದೆನೆ ಎಂದು ಅವರು ತಿಳಿಸಿದ್ದಾರೆ.
 
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಮೈಸೂರಿನ ಉಸ್ತುವಾರಿಯಾದಾಗ ಮಾವುತರಿಗೆ ಹಾಗೂ ಕಾವಡಿಗರ ಸಮಸ್ಯೆಗೆ ಪರಿಹಾರ ನೀಡಿದ್ದವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೂ ರಾಜ್ಯ ರಾಜಕಾರಣಕ್ಕೂ ಯಾವುದೇ ಸಂಬಂಧವಿಲ್ಲ.ಇವತ್ತು ನಾನು ವೈಯಕ್ತಿಕವಾಗಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದೇನೆ. 2024ರ ಚುನಾವಣೆ ಪ್ರಧಾನಿ ಮೋದಿಜಿ ಅವರ ಹೆಸರಲ್ಲೇ ನಡೆಯುವುದು. ಶೋಭಾ ಕರಂದ್ಲಾಜೆಯವರು ಅನೇಕ ಒಳ್ಳೆ ಕೆಲಸ ಮಾಡಿ ಕೇಂದ್ರ ಸಚಿವೆಯಾಗಿದ್ದಾರೆ. ಅವರು ಇನ್ನೂ ಉನ್ನತಿಗೆ ಹೋಗಲಿ ಎಂದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ