ವಿಡಿಯೋ ನೋಡೋಕೆ ಧೈರ್ಯ ಬರಲಿಲ್ಲ: ನಿಖಿಲ್ ಕುಮಾರಸ್ವಾಮಿ ಫಸ್ಟ್ ರಿಯಾಕ್ಷನ್

Sampriya

ಶನಿವಾರ, 4 ಮೇ 2024 (15:41 IST)
Photo Courtesy X
ಬೆಂಗಳೂರು: ಹಾಸನ ಸಂಸದರಿಗೂ ನನಗೂ ಸಂಪರ್ಕವಿರಲಿಲ್ಲ, ಆ ವಿಡಿಯೋಗಳನ್ನು ನೋಡಲು ಧೈರ್ಯ ಮಾಡಲಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.

ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಆರೋಗ್ಯವನ್ನು ವಿಚಾರಿಸಿದ ನಂತರ ಮಾಧ್ಯಮದವರ ಮುಂದೆ ಮಾತನಾಡಿದ ಅವರು,   ಆ ವಿಡಿಯೋಗಳನ್ನು ನೋಡಲು ನಾನು ಧೈರ್ಯ ಮಾಡಲಿಲ್ಲ, ನನ್ನ ಸ್ನೇಹಿತರು ಫೋನ್‌ ಮಾಡಿ ಹೇಳಿದರು. ಬ್ಲರ್‌ ಮಾಡದೇ ವಿಡಿಯೋ ಶೇರ್ ಮಾಡಿದ್ದಾರೆ. ಅಂತವರ ವಿರುದ್ಧ ಕಠಿಣ ಕ್ರಮವಾಗಬೇಕೆಂದರು.

ರಾಜ್ಯ ಸರ್ಕಾರ ಈಗಾಗಲೇ ಎಸ್‌ಐಟಿ ರಚನೆ ಮಾಡಿದ್ದು, ತನಿಖೆ ಆಗುತ್ತಿದೆ. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ಅಂತಿಮವಾಗಿ ಎಸ್‌ಐಟಿ ವರದಿ ಬಂದ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತಾರೆ. ಅದರ ಬಗ್ಗೆ ನಾನು ಹೆಚ್ಚಿಗೆ ಮಾತನಾಡಲ್ಲ ಎಂದರು.

ಈ ಪ್ರಕರಣವನ್ನು ರಾಜಕೀಯವಾಗಿ ಬಳಸಲಾಗುತ್ತಿದೆ. ರಾಜ್ಯದ ಜನಕ್ಕೆ ತಪ್ಪು ಸಂದೇಶ ಕೊಡುವ ಕೆಲಸ ಆಗುತ್ತಿದೆ. ಎಚ್‌ಡಿ ದೇವೇಗೌಡರು ಹಾಗೂ ಎಚ್‌ಡಿ ಕುಮಾರಸ್ವಾಮಿ ಅವರ ಬದುಕು ರಾಜ್ಯದ ಜನರಿಗೆ ಗೊತ್ತಿದೆ. ಅದರಲ್ಲೂ ವಿಶೇಷವಾಗಿ ಎಚ್‌ಡಿ ದೇವೇಗೌಡರ ವೈಯಕ್ತಿಕ ಬದುಕು ತೆರೆದ ಪುಸ್ತಕ, ಅವರಾಗಲಿ, ನಮ್ಮಜ್ಜಿ ಚೆನ್ನಮ್ಮ ಆಗಲಿ ನಮ್ಮಂತ ಯುವಕರಿಗೆ ಸ್ಫೂರ್ತಿ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ