ನನಗೆ ಬಿಎಸ್‌ವೈರಂತೆ ಕೆಟ್ಟ ಪದ, ಏಕವಚನ ಬಳಸಲು ಬರಲ್ಲ: ಸಿಎಂ

ಮಂಗಳವಾರ, 5 ಸೆಪ್ಟಂಬರ್ 2017 (13:39 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಂತೆ ನನಗೆ ಏಕವಚನ ಪ್ರಯೋಗಿಸುವುದಾಗಲಿ ಅಥವಾ ಕೆಟ್ಟಪದಗಳನ್ನು ಬಳಸಲು ಬರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ನಾವು ಕೂಡಾ ಬಳ್ಳಾರಿಗೆ ಶಾಂತಿಯುತವಾಗಿ ಪಾದಯಾತ್ರೆ ಮಾಡಿದ್ದೇವೆ. ನೀವು ಕೂಡಾ ಶಾಂತಿಯುತವಾಗಿ ಪಾದಯಾತ್ರೆ ಮಾಡಿ. ನಾವು ನಿಮ್ಮೊಂದಿಗೆ ಕೈ ಜೋಡಿಸಿ ಸಹಕರಿಸುತ್ತೇವೆ ಎಂದು ತಿಳಿಸಿದ್ದಾರೆ.
 
ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದಷ್ಟೆ ಶಾಂತಿ ನೆಲೆಸಿದೆ. ರಾಜ್ಯದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಬಾರದು ಎನ್ನುವ ಕಾರಣಕ್ಕೆ ಬಿಜೆಪಿಯ ಮಂಗಳೂರು ಚಲೋ ಕಾರ್ಯಕ್ರಮವನ್ನು ತಡೆಯಲಾಗಿದೆ ಎಂದು ತಿಳಿಸಿದ್ದಾರೆ.
 
ಬಿಜೆಪಿಯವರಿಗೆ ರಾಜ್ಯದಲ್ಲಿ ಅನಗತ್ಯ ಗೊಂದಲ ಮೂಡಿಸುವುದು ಕೋಮುವಿಚಾರಗಳಲ್ಲಿ ಹಸ್ತಕ್ಷೇಪ ಮಾಡುವುದೇ ಕಾಯಕವಾಗಿದೆ. ಅವರಿಗೆ ರಾಜ್ಯದ ಜನತೆಯ ಏಳಿಗೆ ಬೇಡವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ