ಯಡಿಯೂರಪ್ಪರಿಂದ ರಾಜಕೀಯ ಪಾಠ ಕಲಿಯಬೇಕಾಗಿಲ್ಲ: ದೇವೇಗೌಡ

ಮಂಗಳವಾರ, 18 ಏಪ್ರಿಲ್ 2017 (13:33 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಂದ ರಾಜಕೀಯ ಪಾಠ ಕಲಿಯಬೇಕಾಗಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿರುಗೇಟು ನೀಡಿದ್ದಾರೆ.
 
ಉಪಚುನಾವಣೆಯಲ್ಲಿ ಕೇವಲ 10 ತಿಂಗಳ ಅವಧಿಗೆ ಜೆಡಿಎಸ್ ಅಭ್ಯರ್ಥಿ ನಿಲ್ಲಿಸುವ ಅಗತ್ಯವಿರಲಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳ ಕೋಟಿ ಕೋಟಿ ಹಣದ ಅಬ್ಬರದ ನಡುವೆ ಪ್ರಾದೇಶಿಕ ಪಕ್ಷ ಖರ್ಚು ಮಾಡಲು ಸಾಧ್ಯವಿಲ್ಲ. ಆದ್ದರಿಂದ, ಚುನಾವಣೆಗೆ ಅಭ್ಯರ್ಥಿಯನ್ನು ನಿಲ್ಲಿಸಲಿಲ್ಲ ಎಂದು ಸಮರ್ಥನೆ ನೀಡಿದ್ದಾರೆ.
 
ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಒಳಒಪ್ಪಂದವಾಗಿದೆ ಎನ್ನುವ ಯಡಿಯೂರಪ್ಪ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್ ಪಕ್ಷ ಯಾವುದೇ ಪಕ್ಷದೊಂದಿಗೆ ಒಳಒಪ್ಪಂದ ಮಾಡಿಕೊಂಡಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಏಕಾಂಗಿಯಾಗಿ ಕಣಕ್ಕಿಳಿಯಲಿದೆ ಎಂದು ತಿಳಿಸಿದ್ದಾರೆ.
 
ಮುಂದಿನ ವಿಧಾನಸಭೆ ಚುನಾವಣೆಗಾಗಿ ರಾಜ್ಯದಾದ್ಯಂತ ಪ್ರಚಾರ ಮಾಡಿ ಪಕ್ಷವನ್ನು ಸಂಘಟಿಸುವತ್ತ ಗಮನಕೊಡಲಾಗುವುದು. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಚಾರದ ನೇತೃತ್ವವಹಿಸಲಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ