ಕುಮಾರಸ್ವಾಮಿ ಹೇಳಿಕೆಯ ಆಳ, ಅಂತ್ಯ ಗೊತ್ತಿಲ್ಲ: ಸಚಿವ ರಮೇಶ್ ಕುಮಾರ್

ಶುಕ್ರವಾರ, 18 ನವೆಂಬರ್ 2016 (15:19 IST)
ಕಾಂಗ್ರೆಸ್ ನಾಯಕರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ರಮೇಶ್ ಕುಮಾರ್, ಎಚ್‌ಡಿಕೆ ಯಾಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ ತಿಳಿಯದು ಎಂದು ಹೇಳಿದ್ದಾರೆ. 
 
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಸಂಘಟನೆಗೆ ಕೆಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕಾಗುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯಾಕಿ ಇಂತಹ ಹೇಳಿಕೆ ನೀಡುತ್ತಿದ್ದಾರೆ ತಿಳಿಯದು. ವೈಯಕ್ತಿಕ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದರು. 
 
ಕಾಂಗ್ರೆಸ್ ನಾಯಕರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಎಚ್‌ಡಿಕೆ ಬಾಂಬ್ ಸಿಡಿಸಿದ್ದಾರೆ. ಆದರೆ, ಅವರು ಪಕ್ಷ ಸಂಘಟನೆಗಾಗಿ ಯಾರನ್ನು ಸಂಪರ್ಕಿಸಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು. 
 
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 500, 1000 ರೂಪಾಯಿಗಳ ನೋಟ್‌ಗಳನ್ನು ಬ್ಯಾನ್ ಮಾಡಿದ್ದು ಸ್ವಾಗತಾರ್ಹ. ಭಯೋತ್ಪಾದನೆ ಹಾಗೂ ಕಪ್ಪು ಹಣ ತಡೆಗಟ್ಟಲು ಈ ಕ್ರಮ ಸರಿಯಾಗಿದೆ. ಆದರೆ, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕಿತ್ತು ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಅಭಿಪ್ರಾಯಪಟ್ಟರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ