ಸಿಎಂ ಕುರ್ಚಿ ಬಗ್ಗೆ ಮಾಧ್ಯಮದ ಮುಂದೆ ಮಾತನಾಡಬಾರದೆಂದು ಸೂಚನೆ ಬಂದಿದೆ: ಎಚ್ ಎಂ ರೇವಣ್ಣ
ಒಂದಿಬ್ಬರು ಶಾಸಕರ ಹೇಳಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಯಾವ ಶಾಸಕರ ಬೆಂಬಲ ಯಾರಿಗೆ ಇದೆ ಎಂಬ ಪ್ರಶ್ನೆ ಈಗೇಕೆ ಬಂದಿತು ಎಂಬುದು ಗೊತ್ತಿಲ್ಲ. ಡಿ.ಕೆ. ಶಿವಕುಮಾರ್– ಸಿದ್ದರಾಮಯ್ಯ ಜೋಡೆತ್ತಿನ ರೀತಿ ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತಂದಿದ್ದಾರೆ. ರಾಜಕಾರಣದಲ್ಲಿ ಎಲ್ಲರಿಗೂ ದೊಡ್ಡ ಹುದ್ದೆಯ ಆಸೆ ಇರುತ್ತದೆ. ಅಂತಿಮ ತೀರ್ಮಾನ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ತಿಳಿಸಿದರು.