ಪುತ್ರನಿಗೆ ಟಿಕೆಟ್ ಕೊಡುವಂತೆ ಹೈಕಮಾಂಡ್‌ನ್ನು ಕೋರಿಲ್ಲ: ಸಚಿವ ಎಚ್.ಸಿ.ಮಹಾದೇವಪ್ಪ

ಸೋಮವಾರ, 9 ಜನವರಿ 2017 (15:19 IST)
ನಂಜನಗೂಡು ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ನಾನಲ್ಲ, ನಾನು ನನ್ನ ಮಗನಿಗಾಗಿ ನಮ್ಮ ಪಕ್ಷದಲ್ಲಿ ಟಿಕೆಟ್ ಸಹ ಕೇಳಿಲ್ಲ ಎಂದು ಲೋಕೋಪಯೋಗಿ ಖಾತೆ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜನಗೂಡು ಉಪಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ನನ್ನ ಮಗ ಸುನೀಲ್ ಬೋಸ್ ಎಲ್ಲಿಯೂ ಹೇಳಿಲ್ಲ. ಕಾರ್ಯಕರ್ತರ ಅಭಿಪ್ರಾಯದಂತೆ ಸೂಕ್ತ ಅಭ್ಯರ್ಥಿಯ ಆಯ್ಕೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.
 
ಉಪಚುನಾವಣೆ ಕುರಿತು ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕುರಿತು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದರು.
 
ಬಿಎಸ್‌ವೈ ಭವಿಷ್ಯ ಸತ್ಯವಾಯಿತೇ?
 
ನಂಜನಗೂಡ ಉಪಚುನಾವಣೆಯಲ್ಲಿ ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಸ್ಪರ್ಧಿಸಲ್ಲ. ಅದು ಏಕೆ ಎಂದು ನಾನು ಹೇಳಲ್ಲ, ಕಾದು ನೋಡಿ ಎಂದು ಈ ಹಿಂದೆಯೇ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಭವಿಷ್ಯ ನುಡಿದಿದ್ದರು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ