ಎಟಿಎಂ ಹಲ್ಲೆ ಪ್ರಕರಣ: ಆರೋಪಿಯ ಬಂಧನದ ಮಾಹಿತಿ ಇಲ್ಲ ಎಂದ ಪೊಲೀಸ್ ಆಯುಕ್ತ

ಶನಿವಾರ, 4 ಫೆಬ್ರವರಿ 2017 (17:39 IST)
ಎಟಿಎಂನಲ್ಲಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯಾರನ್ನು ಬಂಧಿಸಿದ ಮಾಹಿತಿ ಇಲ್ಲ. ಆರೋಪಿಯ ಬಂಧನವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಯಾವ ಆಧಾರದ ಮೇಲೆ ಖಚಿತ ಪಡೆಸಿದ್ದಾರೋ ಗೊತ್ತಿಲ್ಲ ಎಂದು ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ತಿಳಿಸಿದ್ದಾರೆ.  
 
ಬೆಂಗಳೂರಿನ ಕಾರ್ಪೋರೇಶನ್ ಬಳಿಯ ಕಾರ್ಪೊರೇಶನ್ ಎಟಿಎಂನಲ್ಲಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ವ್ಯಕ್ತಿಯನ್ನ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿಯಲ್ಲಿ ಬಂಧಿಸಲಾಗಿದೆ. ಬಂಧಿತನನ್ನ ಮಧುಕರ್ ರೆಡ್ಡಿ ಎಂದು ಗುರ್ತಿಸಲಾಗಿದೆ . ಈ ಕುರಿತು ಆರೋಪಿಯ ಬಂಧನವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸಹ ಸ್ಪಷ್ಟಪಡಿಸಿದ್ದರು. ಆದರೆ, ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರು ಈ ಕುರಿತು ಮಾಹಿತಿಯೇ ಇಲ್ಲ ಎನ್ನುತ್ತಿದ್ದಾರೆ. ಹಾಗಾದರೇ ಆರೋಪಿಯ ಬಂಧನವಾಗಿರುವ ಕುರಿತು ಅನುಮಾನ ವ್ಯಕ್ತವಾಗುತ್ತಿದೆ. 
 
ಕಳೆದ ಮೂರು ವರ್ಷಗಳ ಹಿಂದೆ ಬೆಂಗಳೂರಿನ ಕಾರ್ಪೊರೇಶನ್ ಕಚೇರಿ ಆವರಣದಲ್ಲಿರುವ ಕಾರ್ಪೊರೇಶನ್ ಬ್ಯಾಂಕ್ ಎಟಿಎಂನಲ್ಲಿ ಹಣ ಡ್ರಾ ಮಾಡಲು ತೆರಳಿದ್ದ ಜ್ಯೋತಿ ಉದಯ್ ಎಂಬ ಮಹಿಳೆಯ ಮೇಲೆ ಆರೋಪಿ ಭೀಕರವಾಗಿ ಹಲ್ಲೆ ನಡೆಸಿ ಎಟಿಎಂ ಕಾರ್ಡ್ ಹೊತ್ತು ಪರಾರಿಯಾಗಿದ್ದ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ