ಕೆಪಿಸಿಸಿ ಅಧ್ಯಕ್ಷರ ಆಯ್ಕೆಯಲ್ಲಿ ಹಸ್ತಕ್ಷೇಪವಿಲ್ಲ: ಮಲ್ಲಿಕಾರ್ಜುನ್ ಖರ್ಗೆ

ಶುಕ್ರವಾರ, 3 ಮಾರ್ಚ್ 2017 (16:32 IST)
ಕೆಪಿಸಿಸಿ ಅಧ್ಯಕ್ಷರ ಆಯ್ಕೆಯಲ್ಲಿ ಹಸ್ತಕ್ಷೇಪ ನಡೆಸುವುದಿಲ್ಲ. ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
 
 ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಹೈಕಮಾಂಡ್ ನನ್ನ ಅಭಿಪ್ರಾಯ ಕೇಳಿದಲ್ಲಿ ಹೇಳುತ್ತೇನೆ. ಅದನ್ನು ಬಿಟ್ಟು ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ ನನ್ನ ಪಾತ್ರವಿರುವುದಿಲ್ಲ ಎಂದು ತಿಳಿಸಿದ್ದಾರೆ.
 
ಹೈದ್ರಾಬಾದ್- ಕರ್ನಾಟಕ ಅಭಿವೃದ್ಧಿ ಬಗ್ಗೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷರು ನಿವಾಸಕ್ಕೆ ಆಗಮಿಸಿದ್ದರು. ನಿನ್ನೆ 21 ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
 
ಡೈರಿ ವಿವಾದ ಮುಗಿದ ಅಧ್ಯಾಯವಾಗಿದ್ದರಿಂದ ರಾಜಕೀಯ ಕೆಸರೆರಚಾಟ ಸೂಕ್ತವಲ್ಲ. ರಾಜ್ಯದ ಅಭಿವೃದ್ಧಿಯತ್ತ ಗಮನಹರಿಸುವುದು ಸೂಕ್ತ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ