ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಿಲ್ಲ: ಸಿಎಂ ಸಿದ್ದರಾಮಯ್ಯ
ಶುಕ್ರವಾರ, 4 ನವೆಂಬರ್ 2016 (17:38 IST)
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೂತನ ಅಧ್ಯಕ್ಷರ ನೇಮಕಾತಿ ಕುರಿತಂತೆ ಹೈಕಮಾಂಡ್‌ನೊಂದಿಗೆ ಚರ್ಚಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾಗಿ ಜಿ.ಪರಮೇಶ್ವರ್ ಆರು ವರ್ಷ ಪೂರೈಸಿದ್ದಾರೆ. ಆದರೆ, ಕೆಪಿಸಿಸಿಗೆ ಯಾರನ್ನು ನೇಮಕ ಮಾಡಬೇಕು ಎಂದು ಶಿಫಾರಸು ಮಾಡಿಲ್ಲ ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್‌ನ ಮೂರು ಸ್ಥಾನಗಳಿಗೆ ಯಾರನ್ನು ನಾಮಕರಣ ಮಾಡಬೇಕು ಎಂದು ಹೇಳಿದ್ದೇನೆ. ಶೀಘ್ರದಲ್ಲಿ ಅವರ ಹೆಸರುಗಳನ್ನು ಪ್ರಕಟಿಸುತ್ತೇವೆ. ಹೈಕಮಾಂಡ್ ಮತ್ತು ನನ್ನ ನಡುವಿನ ಚರ್ಚೆಯ ವಿಷಯಗಳನ್ನು ಮಾಧ್ಯಮಗಳ ಮುಂದೆ ಹೇಳಲಾಗದು ಎಂದರು.
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ