‘ನಾನು ಜಾತಿ ರಾಜಕಾರಣ ಮಾಡಿಲ್ಲ- C.T. ರವಿ

ಶುಕ್ರವಾರ, 17 ಮಾರ್ಚ್ 2023 (21:06 IST)
ನಾನೆಂದೂ ಜಾತಿ ರಾಜಕಾರಣ ಮಾಡಿಲ್ಲ. ಆ ಬಗ್ಗೆ ನನ್ನ ಕನಸು-ಮನಸ್ಸಿಲ್ಲಿಯೂ ಯೋಚನೆ ಮಾಡಿಲ್ಲ. ಲಿಂಗಾಯತ ಸಮುದಾಯದ ಅವಹೇಳನಾಕಾರಿ ಹೇಳಿಕೆ ಎಂದು ಕಾಂಗ್ರೆಸ್ ಬಿಂಬಿಸುತ್ತಿದ್ದು, ಅದು ಕಾಂಗ್ರೆಸ್ಸಿನ ಸುಳ್ಳಿನ ಫ್ಯಾಕ್ಟರಿಯಿಂದ ಬಂದ ಫೇಕ್ ನ್ಯೂಸ್, ಕಾಂಗ್ರೆಸ್ಸಿಗರೇ ಹಬ್ಬಿಸಿದ್ದಾರೆ ಎಂದು BJP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ C.T. ರವಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯುತ್ತಿರುವ BJP ವಿಜಯ ಸಂಕಲ್ಪ ಯಾತ್ರೆ ಬಳಿಕ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಲಿಂಗಾಯತ ವಿರೋಧಿ ಭಾವನೆ ಹುಟ್ಟು ಹಾಕುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಇಂತಹ ಪ್ರಯತ್ನವನ್ನು ಹಿಂದೆಯೂ ಮಾಡಿ ವಿಫಲರಾಗಿದ್ದಾರೆ. ಈಗಲೂ ಮಾಡುತ್ತಿದ್ದಾರೆ. ಈಗಲೂ ವಿಫಲರಾಗುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಾನು ಮಾತನಾಡದಿದ್ದರೆ ಕ್ಷಮೆಯಾಚನೆ ಮಾಡುತ್ತಿದ್ದೆ. ನಾನು ಆ ರೀತಿ ಮಾತನಾಡಿಲ್ಲ, ಕ್ಷಮೆ ಕೇಳುವ ಪ್ರಮೇಯವೇ ಇಲ್ಲ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ