ಪ್ರಜ್ವಲ್‌ಗೆ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ, ವೈಟ್ ಸಿಗ್ನಲ್ ಕೊಟ್ಟಿಲ್ಲ: ದೇವೇಗೌಡ
ಬುಧವಾರ, 8 ನವೆಂಬರ್ 2017 (18:32 IST)
ಪ್ರಜ್ವಲ್ ರೇವಣ್ಣ ವಿಧಾನಸಭೆ ಚುನಾವಣೆ ಸ್ಪರ್ಧೆಗೆ ದೇವೇಗೌಡರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನುವ ಸೊಸೆ ಭವಾನಿ ರೇವಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಪ್ರಜ್ವಲ್‌ಗೆ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ, ವೈಟ್ ಸಿಗ್ನಲ್ ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಪ್ರಜ್ವಲ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಪ್ರಜ್ವಲ್ ಸ್ಪರ್ಧೆಯ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಆದರೆ, ರಾಜಕೀಯಕ್ಕೆ ಬರೋದು ನಿಜ. ನಿಖಿಲ್ ಕೂಡಾ ರಾಜಕೀಯಕ್ಕೆ ಬರೋದು ಅಷ್ಟೇ ನಿಜ ಎಂದು ತಿಳಿಸಿದ್ದಾರೆ.
ನಾನು ಪ್ರಧಾನಮಂತ್ರಿಯಾಗುತ್ತೇನೆ ಅಂದುಕೊಂಡಿರಲಿಲ್ಲ. ನಾವು ಏನಾಗಬೇಕು ಎನ್ನುವುದನ್ನು ಜನತೆ ತೀರ್ಮಾನ ಮಾಡುತ್ತಾರೆ.
ಹಿಂದೆ ಬಿಜೆಪಿ ಜತೆ ಸೇರಿ ಸರಕಾರ ರಚಿಸಿ ತಪ್ಪು ಮಾಡಿದ್ದೇನೆ ಎಂದು ಕುಮಾರಸ್ವಾಮಿ ಕೇಳಿಕೊಂಡಿದ್ದರಿಂದ ಮೈಸೂರಿಗೆ ಬಂದಿದ್ದೇನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.