ನನಗೆ ಯಾವುದೇ ಬೆದರಿಕೆ ಬಂದಿಲ್ಲ: ಸಿಎಂ

geetha

ಗುರುವಾರ, 7 ಮಾರ್ಚ್ 2024 (15:00 IST)
ಬೆಂಗಳೂರು-ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ನನಗೆ ಯಾವುದೇ ಬೆದರಿಕೆ ಬಂದಿಲ್ಲ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದೆ.
 
ಇನ್ನೂ  ಇದರ ಬಗ್ಗೆ ಪೊಲೀಸರು, ಸಿಸಿಬಿ ಹಾಗೂ ಎನ್ ಐ ಎ ಯವರು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ಸ್ಪೋಟದ ಬಗ್ಗೆ ಕೆಲವು ಸುಳಿವುಗಳು ಸಿಕ್ಕಿದ್ದು, ಎನ್ ಐ ಎ ಯವರು ಐವರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ ಎಂದರು.ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ ಅವರು ಮುಖ್ಯಮಂತ್ರಿಗಳನ್ನು ಅಗೌರವದಿಂದ ಮಾತನಾಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಹಾಗೂ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿರುವವರು ಈ ರೀತಿ ಮಾತನಾಡುವುದಿಲ್ಲ.
 
ಜನವಿರೋಧಿಯಾಗಿರುವವರು ಮಾತ್ರ ಈ ರೀತಿ ಮಾತನಾಡುತ್ತಾರೆ. ಅವರಿಗೆ ಸಂಸ್ಕೃತಿ ಇಲ್ಲ. ಅವರು ಮನುವಾದಿ ಹಾಗೂ ಹಿಂದುತ್ವವಾದಿ. ಕೇವಲ ಕಳೆದ 2-3 ತಿಂಗಳಿನಿಂದ ಚುರುಕಾಗಿದ್ದು, ಅವರು ಇಷ್ಟು ದಿನ ಎಲ್ಲಿದ್ದರು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
 
ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನನಗೆ ಯಾವುದೇ ಬೆದರಿಕೆ ಬಂದಿಲ್ಲ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದೆ. ಇದರ ಬಗ್ಗೆ ಪೊಲೀಸರು, ಸಿಸಿಬಿ ಹಾಗೂ ಎನ್ ಐ ಎ ಯವರು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ಸ್ಪೋಟದ ಬಗ್ಗೆ ಕೆಲವು ಸುಳಿವುಗಳು ಸಿಕ್ಕಿದ್ದು, ಎನ್ ಐ ಎ ಯವರು ಐವರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ