ನರೇಂದ್ರ ಮೋದಿ ರೀತಿ ಸುಳ್ಳು ಹೇಳುವ ಪ್ರಧಾನ ಮಂತ್ರಿಯನ್ನು ನಾನು ನೋಡಿಯೇ ಇಲ್ಲ-ಸಿಎಂ ಸಿದ್ದರಾಮಯ್ಯ

ಗುರುವಾರ, 15 ಮಾರ್ಚ್ 2018 (06:16 IST)
ಬೆಂಗಳೂರು : ‘ನಾನು 40 ವರ್ಷಗಳಿಂದ ರಾಜಕಾರಣದಲ್ಲಿ ಇದ್ದೀನಿ. ಆದರೆ ನರೇಂದ್ರ ಮೋದಿ ರೀತಿ ಸುಳ್ಳು ಹೇಳುವ ಪ್ರಧಾನ ಮಂತ್ರಿಯನ್ನು ನಾನು ನೋಡಿಯೇ ಇಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಅವರ ವಿರುದ್ದ ವಾಗ್ದಾಳಿ ಮಾಡಿದ್ದಾರೆ.


‘ಜೈಲಿಗೆ ಹೋಗಿದ್ದ ಯಡಿಯೂರಪ್ಪ ಹಾಗೂ ಕಟ್ಟಾ ಸುಬ್ರಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ, ಹಾಲಪ್ಪ ಹಾಗೂ ಇನ್ನಿತರೆ ನಾಯಕರನ್ನು ಪಕ್ಕದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ನಿಮಗೆ ಭ್ರಷ್ಟ ಸರಕಾರ ಬೇಕಾ ಅಥವಾ ಸ್ಥಿರ ಸರಕಾರ ಬೇಕಾ ಎಂದು ಕೇಳಿ ನಮ್ಮ ಸರಕಾರ ಭ್ರಷ್ಟ ಸರಕಾರ ಎಂದು ಆರೋಪ ಮಾಡುತ್ತಾರೆ. ಇದಕ್ಕಿಂತ ದುರಂತ ಬೇರೆ ಯಾವುದೂ ಇಲ್ಲ’ ಎಂದು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ