ನಿಗಮ, ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟ 'ಮರಿ' ಗೌಡ

ಗುರುವಾರ, 27 ಅಕ್ಟೋಬರ್ 2016 (18:28 IST)
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿ ಜೈಲು ಪಾಲಾಗಿದ್ದ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಸಿಎಂ ಆಪ್ತ ಕೆ. ಮರಿಗೌಡ, ಇಂದು ತನ್ನ ಬೆಂಬಲಿಗರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗೃಹ ಕಚೇರಿಗೆ ಆಗಮಿಸಿ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾನೆ. 
 
ನನ್ನ ಅಮಾನತ್ತನ್ನು ವಾಪಸ್ ಪಡೆಯಬೇಕು. ಪಕ್ಷದ ಸೇವೆ ಪರಿಗಣಿಸಿ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಕೆ.ಮರಿಗೌಡ ಆಗ್ರಹಿಸಿದ್ದಾನೆ. 
 
ತಹಶೀಲ್ದಾರ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಕೆ.ಮರಿಗೌಡ ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದರು. ಈ ಕುರಿತು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಮರಿಗೌಡ ತಲೆ ಮರೆಸಿಕೊಂಡಿದ್ದ.
 
ಅಗಸ್ಟ್ 6 ರಂದು ಕೆ.ಮರಿಗೌಡ ನಜರ್‌ಬಾದ್ ಪೊಲೀಸ್ ಠಾಣೆಗೆ ಶರಣಾಗಿದ್ದು, ಜಾಮೀನು ನೀಡುವಂತೆ ಕೋರಿ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಮೈಸೂರು 3 ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಇಂದು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಮರಿಗೌಡ ಜೈಲುವಾಸ ಅನುಭವಿಸಿ. ಬಿಡುಗಡೆ ಹೊಂದಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ