ಕೆಪಿಸಿಸಿ ಹುದ್ದೆಯೂ ಬೇಕು, ಗೃಹ ಸಚಿವ ಸ್ಥಾನವೂ ಬೇಕು: ಪರಮೇಶ್ವರ್

ಮಂಗಳವಾರ, 30 ಮೇ 2017 (18:12 IST)
ನನಗೆ ಕೆಪಿಸಿಸಿ ಹುದ್ದೆಯೊಂದಿಗೆ ಗೃಹ ಸಚಿವ ಸ್ಥಾನವೂ ಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತ ವರದಿಗಳನ್ನು ತಳ್ಳಿಹಾಕಿದ ಅವರು, ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದಾರೆ.
 
ಹೈಕಮಾಂಡ್ ನೀಡುವ ಯಾವುದೇ ಹೊಣೆಯನ್ನು ಕಾಂಗ್ರೆಸ್ ನಾಯಕರು ನಿರ್ವಹಿಸಲು ಸಿದ್ದರಿದ್ದಾರೆ. ಎಲ್ಲರು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದರು.
 
ಇಂದು ಸಂಜೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನೂತನ ಕೆಪಿಸಿಸಿ ಸಾರಥಿಯನ್ನು ಘೋಷಿಸಲಿದೆ. ಎಲ್ಲರಿಗೂ ಅನುಕೂಲವಾಗುವಂತಹ ಪ್ಯಾಕೇಜ್ ಘೋಷಣೆ ಮಾಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ