ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

Sampriya

ಮಂಗಳವಾರ, 26 ಆಗಸ್ಟ್ 2025 (16:06 IST)
ಬೆಂಗಳೂರು: ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಷಯವನ್ನು ರಾಜಕೀಯ ಮಾಡುವುದು ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಮನವಿ ಮಾಡಿದ್ದಾರೆ. 

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ್ದು ವಿವಾದ ಸೃಷ್ಟಿಯಾಗುತ್ತಿದ್ದ ಹಾಗೇ ಡಿಕೆ ಶಿವಕುಮಾರ್‌ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. 

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ  ಹಾಡಿರುವ ವಿಷಯವನ್ನು ರಾಜಕೀಯ ಮಾಡುವುದು ಬೇಡ, ನನಗೂ ವಿರೋಧ ಪಕ್ಷದ ಸಿದ್ಧಾಂತದ ಬಗ್ಗೆ ಅರಿವಿದೆ ಎಂಬುದನ್ನು ಪ್ರಸ್ತಾಪಿಸಿದೆ ಹೊರತು ನಾನು ಆರ್‌ಎಸ್‌ಎಸ್‌ ಅನ್ನು ಹೊಗಳಲು ಹೇಳಿಲ್ಲ. ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ. ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು. ಯಾರಿಗೆ ಆಗಲಿ ನನ್ನಿಂದ ನೋವಾಗಿದ್ದರೆ ಕ್ಷಮೆ ಕೇಳಲು ಸಿದ್ದ ಎಂದು ಬರೆದುಕೊಂಡಿದ್ದಾರೆ. 

ತಮ್ಮದೇ ಪಕ್ಷದಿಂದ ಡಿಕೆ ಶಿವಕುಮಾರ್‌ ನಡೆಗೆ ವಿರೋಧ ವ್ಯಕ್ತವಾಗುತ್ತಿದ್ದ ಹಾಗೇ ಅವರು ಕ್ಷಮೆಯಾಚಿಸಿದ್ದಾರೆ. 


Photo Credit X

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ