ನನ್ನ ಕುತ್ತಿಗೆ ಕತ್ತರಿಸಿದ್ರೂ ಬಿಜೆಪಿ ಬಿಟ್ಟು ಹೋಗುವುದಿಲ್ಲ: ಕೆ.ಎಸ್.ಈಶ್ವರಪ್ಪ

ಬುಧವಾರ, 23 ನವೆಂಬರ್ 2016 (12:36 IST)
ನನ್ನ ಕುತ್ತಿಗೆ ಕತ್ತರಿಸಿದ್ರೂ ಬಿಜೆಪಿ ಬಿಟ್ಟು ಹೋಗುವುದಿಲ್ಲ. ಬಿಜೆಪಿಗೆ ಮೋಸ ಮಾಡಿದ್ರೆ ತಾಯಿಗೆ ಮೋಸ ಮಾಡಿದಂತೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ.
 
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಆಕ್ಷೇಪ ವ್ಯಕ್ತಪಡಿಸಿದ್ದು ನಿಜ. ಆದರೆ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್‌ಲಾಲ್ ಅವರ ಸಲಹೆ ಮೇರೆಗೆ ಬಿಎಸ್‌ವೈ ಅವರೊಂದಿಗೆ ಚರ್ಚೆ ನಡೆಸಿದೆ. ಬಳಿಕ ಬ್ರಿಗೇಡ್‌ಗೆ ಅವರು ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ ಎಂದರು.
 
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಬಿಜೆಪಿಯ ಸಮ್ಮತಿ ಇದೆ. ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ 40 ಶಾಸಕರ ಗೆಲುವಿಗೆ ಬ್ರಿಗೇಡ್ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು. ಆದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬ್ರಿಗೇಡ್‌ಗೆ ವಿರೋಧ ವ್ಯಕ್ತಪಡಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ