ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ: ಐ ಡೋಂಟ್ ರಿಯಾಕ್ಟ್ ಎಂದ ಸಿಎಂ ಸಿದ್ದರಾಮಯ್ಯ

ಮಂಗಳವಾರ, 7 ಮಾರ್ಚ್ 2017 (13:06 IST)
ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗುವ ಬಗ್ಗೆ ನನಗೆ ತಿಳಿದಿಲ್ಲ. ನನಗೆ ತಿಳಿಯದ ವಿಷಯಗಳ ಬಗ್ಗೆ ಐ ಡೋಂಟ್ ರಿಯಾಕ್ಟ್ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ನಿನ್ನೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಅಧಿಕೃತ ಆಹ್ವಾನ ನೀಡಿದ್ದರು.
 
ಶೀಘ್ರದಲ್ಲಿಯೇ ಎಸ್.ಎಂ. ಕೃಷ್ಣ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವುದು ಖಚಿತ ಎಂದು ಯಡಿಯೂರಪ್ಪ ತಿಳಿಸಿದ್ದರು. 
 
ಮತ್ತೊಬ್ಬ ಬಿಜೆಪಿ ಮುಖಂಡ ಆರ್.ಅಶೋಕ್ ಕೂಡಾ ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೃಷ್ಣ ಅವರು ಕೇಂದ್ರ ಸರಕಾರದ ಹಲವು ಕ್ರಮಗಳನ್ನು ಸ್ವಾಗತಿಸಿದ್ದಾರೆ. ರಾಜ್ಯ ಸರಕಾರದ ಕಾರ್ಯವೈಖರಿಯ ಬಗ್ಗೆ ಅಸಮಾಧಾನಗೊಂಡಿದ್ದರಿಂದ ಬಿಜೆಪಿ ಪಕ್ಷ ಸೇರುವುದು ಖಚಿತ ಎಂದು ಮಾಹಿತಿ ನೀಡಿದ್ದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ