ಮಾತೆ ಮಹಾದೇವಿ ಹೇಳಿಕೆಗೆ ಪ್ರತಿಕ್ರಿಯೆ ನೀಡೋಲ್ಲ: ಯಡಿಯೂರಪ್ಪ

ಬುಧವಾರ, 13 ಸೆಪ್ಟಂಬರ್ 2017 (19:29 IST)
ಸಿದ್ದಗಂಗಾಶ್ರೀ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಾತೆ ಮಹಾದೇವಿ ಹೇಳಿಕೆ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡಲಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಧರ್ಮ ವಿಚಾರದಲ್ಲಿ ನಾನು ಮೊದಲಿನಿಂದಲೂ ನಾನು ಮೌನವಾಗಿದ್ದೇನೆ.ವೀರಶೈವ ಮಹಾಸಭಾ ನಿರ್ಣಯಕ್ಕೆ ಬದ್ಧನಾಗಿರ್ತೇನೆ ಎಂದು ತಿಳಿಸಿದ್ದಾರೆ.
 
ಸೆ.23 ರಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ವಿರುದ್ಧದ ಹೋರಾಟಕ್ಕಾಗಿ ವಿಶೇಷ ಸಮಿತಿ ರಚಿಸಲಾಗಿದೆ. ನೀರಾವರಿ ಇಲಾಖೆಯಲ್ಲಿ ನಡೆದ ಹಗರಣಗಳ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಪ್ರತಿಭಟನೆಯಲ್ಲಿ 1 ಲಕ್ಷ ಕಾರ್ಯಕರ್ಕತರು ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
 
ಸಚಿವರ ಹಗರಣಗಳನ್ನು ಸಮಿತಿಯೊಂದು ಸಂಗ್ರಹಿಸುತ್ತಿದ್ದು, ಸೆಪ್ಟೆಂಬರ್ 23 ರಂದು ಬಹಿರಂಗಪಡಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ