ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವವರೆಗೂ ಮನೆಗೆ ಹೋಗಲ್ಲ: ಯಡಿಯೂರಪ್ಪ ಘೋಷಣೆ

ಮಂಗಳವಾರ, 4 ಅಕ್ಟೋಬರ್ 2016 (19:45 IST)
ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವವರೆಗೂ ಮನೆಗೆ ಹೋಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಜ್ಞೆ ಮಾಡಿದ್ದಾರೆ.
 
ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿಜಿಪಿ ರಾಜ್ಯಾಧ್ಯಕ್ಷನಾದ ದಿನದಿಂದ ಇಲ್ಲಿಯವರೆಗೂ ಮರಳಿ ಮನೆಗೆ ಹೋಗಿಲ್ಲ. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದ ಬಳಿಕವೇ ಮನೆಗೆ ಪ್ರವೇಶ ನೀಡುತ್ತೇನೆ ಎಂದು ಶಪಥ ಮಾಡಿದರು.
 
ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷನಾಗಿ ನನ್ನ ಕರ್ತವ್ಯ ನಿಭಾಯಿಸಿದ್ದೇನೆ. ಹಗಲು ರಾತ್ರಿ ಪಕ್ಷ ಸಂಘಟನೆಯಲ್ಲೇ ತೋಡಗಿದ್ದೇನೆ. ರಾಜ್ಯದಲ್ಲಿ ಮತ್ತೇ ಬಿಜೆಪಿಯನ್ನು ಅಧಿಕಾರಕ್ಕೆ ತಂದೇ ತರುತ್ತೇವೆ. ಅಧಿಕಾರದ ಚುಕ್ಕಾಣಿ ಹಿಡಿಯುವವರೆಗೂ ಮನೆಗೆ ಹಿಂದಿರುಗುವುದಿಲ್ಲ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ