ಇಂದೇ ಪ್ರಮಾಣ ವಚನ ಸ್ವೀಕಾರ ಮಾಡುವೆ- ಬಿ.ಎಸ್.ಯಡಿಯೂರಪ್ಪ

ಶುಕ್ರವಾರ, 26 ಜುಲೈ 2019 (10:15 IST)
ಬೆಂಗಳೂರು : ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.



ಕೇಂದ್ರ ಗ್ರಹಸಚಿವ ಅಮಿತ್ ಶಾ ಅವರು ದೂರವಾಣಿ ಮೂಲಕ ಇಂದೇ ಪ್ರಮಾಣವಚನವನ್ನು ಸ್ಪೀಕಾರ ಮಾಡುವಂತೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನ ಸುಮಾರು 12.30ಕ್ಕೆ ಯಡಿಯೂರಪ್ಪ ಅವರ ಪ್ರಮಾಣವಚನವನ್ನು ಸ್ಪೀಕಾರ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

 

ಈ ಬಗ್ಗೆ ತಮ್ಮ ಧವಳಗಿರಿ ನಿವಾಸದಲ್ಲಿ ಬಳಿ ಮಾತನಾಡಿದ ಬಿಎಸ್‍ವೈ, ಈಗಾಗಲೇ ನಾನು ವಿರೋಧ ಪಕ್ಷದ ನಾಯಕನಾಗಿರುವುದರಿಂದ ಮತ್ತೊಮ್ಮೆ ಶಾಸಕಾಂಗದ ಸಭೆ ಅಗತ್ಯವಿಲ್ಲ. ಹೀಗಾಗಿ ನಾನು ಇಂದು ರಾಜ್ಯಪಾಲರನ್ನು ಭೇಟಿಯಾಗುತ್ತಿದ್ದೇನೆ. ಇವತ್ತೇ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲು ಅವಕಾಶ ಮಾಡಿಕೊಡಿ ಎಂದು ರಾಜ್ಯಪಾಲ ಬಳಿ ಮನವಿ ಮಾಡಿಕೊಳ್ಳುತ್ತೇನೆ. ಇದಕ್ಕೆ ಅವರು ಒಪ್ಪಿದರೆ ಇಂದೇ ಪ್ರಮಾಣ ವಚನ ಸ್ವೀಕಾರ ಮಾಡುವೆ ಎಂದು ಹೇಳಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ