ಸಂಪುಟ ಪುನಾರಚನೆಯ ಬಗ್ಗೆ ತಲೆಕೆಡಿಸಿಕೊಂಡಿಲ್ಲ: ಆರ್‌.ವಿ.ದೇಶಪಾಂಡೆ

ಶುಕ್ರವಾರ, 17 ಜೂನ್ 2016 (18:36 IST)
ಸಚಿವ ಸಂಪುಟ ಪುನಾರಚನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹೈಕಮಾಂಡ್‌ನ ಹಿರಿಯರಿಗೆ ಬಿಟ್ಟ ವಿಚಾರವಾಗಿದ್ದರಿಂದ ನಾನು ತಲೆಕೆಡಿಸಿಕೊಳ್ಳಲಿಕ್ಕೆ ಹೋಗಿಲ್ಲ ಎಂದು ಸಚಿವ ಆರ್‌.ವಿ.ದೇಶಪಾಂಡೆ ಹೇಳಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿಯವರೊಂದಿಗೆ ಚರ್ಚೆ ನಡೆಸಿ ಸಂಪುಟ ಪುನಾರಚನೆಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ಪಕ್ಷದ ಹಿತದೃಷ್ಠಿಯಲ್ಲಿ ತೆಗೆದುಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.
 
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅಧ್ಯಕ್ಷ ಹುದ್ದೆಯೊಂದಿಗೆ ಗೃಹ ಸಚಿವರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಎರಡೆರಡು ಹುದ್ದೆಗಳನ್ನು ನಿಭಾಯಿಸುವುದು ತುಂಬಾ ಕಷ್ಟದ ಕೆಲಸವಾಗಿದ್ದರಿಂದ ಕೂಡಲೇ ಕೆಪಿಪಿಸಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡುವುದು ಸೂಕ್ತ ಎಂದು ತಿಳಿಸಿದ್ದಾರೆ.
 
ಹಿರಿಯ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಮಣೆಹಾಕಲಾಗುತ್ತಿದೆ ಎನ್ನುವ ವರದಿಗಳ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, ಉಹಾಪೋಹ ವರದಿಗಳಿಗೆ ನಾನು ಉತ್ತರಿಸುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ಬಂದ ಕೂಡಲೇ ಸಂಪುಟ ಪುನಾರಚನೆಯ ಬಗ್ಗೆ ಸಂಪೂರ್ಣ ಮಾಹಿತಿ ದೊರೆಯಲಿದೆ ಎಂದು ಸಚಿವ ಆರ್‌.ವಿ.ದೇಶಪಾಂಡೆ ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ