ನಾನು ಮೂಲ ಕಾಂಗ್ರೆಸ್ಸಿಗ, ಕಾಂಗ್ರೆಸ್‌ನಲ್ಲಿಯೇ ಇರ್ತೇನೆ: ಷರೀಫ್ ಸ್ಪಷ್ಟನೆ

ಶನಿವಾರ, 1 ಏಪ್ರಿಲ್ 2017 (16:35 IST)
ನಾನು ಮೂಲ ಕಾಂಗ್ರೆಸ್ಸಿಗ, ಕಾಂಗ್ರೆಸ್‌ನಲ್ಲಿಯೇ ಇರ್ತೇನೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್ ಸ್ಪಷ್ಟಪಡಿಸಿದ್ದಾರೆ.
 
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್‌ ರಾಷ್ಟ್ರಪತಿಯಾಗಲು ಅರ್ಹರು ಎಂದು ಜಾಫರ್ ಷರೀಫ್ ಪ್ರಧಾನಿ ಮೋದಿಗೆ ಪತ್ರ ಬರೆದ ನಂತರ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಉಹಾಪೋಹಗಳು ಹರಡಿದ್ದವು.
 
ಉಹಾಪೋಹ ವರದಿಗಳಿಗೆ ತೆರೆ ಎಳೆದ, ಷರೀಫ್, ನಾನು ಯಾವತ್ತೂ ಕಾಂಗ್ರೆಸ್ಸಿಗ. ಕಾಂಗ್ರೆಸ್ ಪಕ್ಷದಿಂದ ಹಲವಾರು ಹುದ್ದೆಗಳ ಅದಿಕಾರ ಅನುಭವಿಸಿದ್ದೇನೆ. ಪಕ್ಷಕ್ಕೆ ದ್ರೋಹ ಬಗೆಯಲಾರೆ ಎಂದು ತಿಳಿಸಿದ್ದಾರೆ.
 
ಮಾಜಿ ರೈಲ್ವೆ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ವರದಿಗಳ ಸತ್ಯಕ್ಕೆ ದೂರವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿರುವುದನ್ನು ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ