MLC ಸ್ಥಾನಕ್ಕೆ ಇಬ್ರಾಹಿಂ ರಾಜೀನಾಮೆ
ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ.ಎಂ.ಇಬ್ರಾಹಿಂ ಅವರು ಇದೀಗ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಳಿಗ್ಗೆ ವಿಧಾನಸೌಧದಲ್ಲಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಗೆ ಆಗಮಿಸಿದ ಇಬ್ರಾಹಿಂ, ಸಭಾಪತಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸ್ವಾಭಿಮಾನ ಹಾಗೂ ರಾಜ್ಯದ ಹಿತದೃಷ್ಡಿಯಿಂದ ಈ ರಾಜೀನಾಮೆ ಅನಿವಾರ್ಯವಾಗಿದೆ. ಕಾಂಗ್ರೆಸ್‌ನಲ್ಲಿ ಸ್ವಾಭಿಮಾನ ಉಳಿಸಿಕೊಂಡು ಇರಲು ಸಾಧ್ಯವಿಲ್ಲ. 1994ರಲ್ಲಿ ಉಂಟಾದ ರಾಜಕೀಯ ಪರಿಸ್ಥಿತಿ 2022ರಲ್ಲೂ ಆಗಲಿದೆ. ಕಾಂಗ್ರೆಸ್ ತನ್ನ ನೆಲೆ ಕಳೆದುಕೊಳ್ಳುತ್ತಿದೆ. ಪಂಚರಾಜ್ಯ ಚುನಾವಣೆಯೇ ಇದಕ್ಕೆ ಸಾಕ್ಷಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದರು.