ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡುವುದು ಬೇಡ.ಕಾವೇರಿ ಕೊಳ್ಳದಲ್ಲಿ ಕುಡಿಯಲು ಮಾತ್ರ ನೀರಿದೆ. ಒಂದು ವೇಳೆ, ನೀರು ಬಿಟ್ಟಲ್ಲಿ ಜನತೆ ಹಾಹಾಕಾರದಿಂದ ಸಾವನ್ನಪ್ಪುತ್ತಾರೆ. ಬದುಕಿದ್ದರೆ ಸಂವಿಧಾನ, ಸತ್ತರೆ ಯಾವ ಸಂವಿಧಾನ ಎಂದು ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಹರಿಸಿದಲ್ಲಿ ಕಾವೇರಿ ಕಣಿವೆಯಲ್ಲಿ ಜನರು, ದನಕರುಗಳು ನೀರಿನ ಬವಣೆಯಿಂದ ಸಾವನ್ನಪ್ಪುವ ಸಾಧ್ಯತೆಗಳಿವೆ. ಆದ್ದರಿಂದ ರಾಜ್ಯ ಸರಕಾರ ನೀರು ಹರಿಸುವ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಒತ್ತಾಯಿಸಿದರು.
ನಿನ್ನೆ ಸುಪ್ರೀಂಕೋರ್ಟ್ ತಮಿಳುನಾಡಿಗೆ ಮೂರು ದಿನಗಳ ಕಾಲ 18 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆಕ್ರೋಶದ ವಾತಾವರಣ ಉಂಟಾಗಿದೆ. ವಿಶೇಷವಾಗಿ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಉದ್ರಿಕ್ತ ಪರಿಸ್ಥಿತಿಯಿದೆ.