ಬಿಜೆಪಿ ಅಧಿಕಾರಕ್ಕೆ ಬಂದ್ರೆ ತಾನೇ ಬಿಎಸ್‌ವೈ ಸಿಎಂ ಆಗೋದು

ಶನಿವಾರ, 27 ಮೇ 2017 (16:04 IST)
ಬಿಜೆಪಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ್ರೆ ತಾನೇ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಲೇವಡಿ ಮಾಡಿದ್ದಾರೆ. 
 
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬುಗಾನಹಳ್ಳಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ಬಿಜೆಪಿ ಹೈಕಮಾಂಡ್‌ನದ್ದು ಇಬ್ಬಗೆ ನೀತಿ. 75 ವರ್ಷ ಆದವರಿಗೆ ಅಧಿಕಾರವಿಲ್ಲ ಎಂದಿತ್ತು. ಇದೀಗ 75 ವರ್ಷದ ಯಡಿಯೂರಪ್ಪನವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳುತ್ತಿರುವುದಾಗಿ ಟೀಕಿಸಿದರು. 
 
ಮಾರ್ಚ್ 29 ಮತ್ತು 30 ರಂದು ಕಾಂಗ್ರೆಸ್ ಪಕ್ಷದ ನಾಯಕರ ಸಭೆ ನಡೆಯಲಿದ್ದು, ಮುಂಬರುವ ಚುನಾವಣೆ ಬಗ್ಗೆ ರಣತಂತ್ರ ರೂಪಿಸಲಾಗುವುದು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.  
 
ಗೋಹತ್ಯೆ ನಿಷೇಧ ಕಾನೂನು ಕುರಿತಂತೆ ಸುದೀರ್ಘವಾಗಿ ಚರ್ಚಿಸಿ ಜಾರಿಗೆ ತರುತ್ತೇವೆ. ಕೇಂದ್ರ ಸರಕಾರದ ಆದೇಶ ಇನ್ನೂ ನಮಗೆ ಬಂದಿಲ್ಲ ಎಂದು ತಿಳಿಸಿದ್ದಾರೆ. 
 
3 ವರ್ಷದ ಅವಧಿಯಲ್ಲಿ ಎನ್‌ಡಿಎ ಸರಕಾರದ ಸಾಧನೆ ಶೂನ್ಯ, ಆತ್ಮಹತ್ಯೆಗೆ ಶರಣಾದ ರೈತರಿಗೆ ನಯಾ ಪೈಸೆ ಪರಿಹಾರ ನೀಡಲಿಲ್ಲ. ಮರಳು ಮಾಫಿಯಾದಂತಹ ಬೆದರಿಕೆಗಳಿಗೆ ಪೊಲೀಸರು ಮಣಿಯುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ