ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ಬ್ರಾಹ್ಮಣರು ಸರ್ಕಾರಕ್ಕೆ ದಾಖಲಾತಿ ಸಲ್ಲಿಸಿ ತಾವು ಹಿಂದೂಗಳಿಗಿಂತ ಭಿನ್ನ ಅಂತ ಸಾಬೀತುಪಡಿಸಲಿ. ಒಂದು ವೇಳೆ ಸಾಬೀತುಪಡಿಸಿದ್ರೆ ಬ್ರಾಹ್ಮಣರಿಗೆ ಪ್ರತ್ಯೇಕ ಧರ್ಮ ಕೊಡೋದ್ರಲ್ಲಿ ತಪ್ಪೇನಿಲ್ಲ. ನಾವು ಲಿಂಗಾಯತರು ಪ್ರತ್ಯೇಕ ಅಂತಾ ಸಾಬೀತು ಮಾಡಿದ್ದೇವೆ. ಕೇಂದ್ರ ಸರ್ಕಾರ ಶೇ.99ರಷ್ಟು ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ ಸೂಚಿಸುತ್ತದೆ ಎಂಬ ನಂಬಿಕೆಯನ್ನು ಹೊಂದಿದ್ದೇವೆ. ಒಂದು ವೇಳೆ ಕೇಂದ್ರ ಸರ್ಕಾರ ಆರ್‍ಎಸ್‍ಎಸ್ ಹಾಗು ಇತರೆ ಒತ್ತಡಗಳಿಂದ ಲಿಂಗಾಯತ ಪ್ರತೇಕ ಧರ್ಮಕ್ಕೆ ಒಪ್ಪಿಗೆ ನೀಡದೇ ಹೋದಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತವೆ. ಜೈನರು ಸಹ ಸುಪ್ರೀಂ ಕೋರ್ಟ್ ಗೆ ತೆರಳಿ ತಮ್ಮದು ಪ್ರತ್ಯೇಕ ಧರ್ಮ ಅಂತಾ ತೆಗೆದುಕೊಂಡಿದ್ದಾರೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ