ಬಿಎಸ್‌ವೈಗೆ ತಾಕತ್ತಿದ್ದರೆ ಭ್ರಷ್ಟ ಸಚಿವರ ಹೆಸರು ಬಹಿರಂಗಪಡಿಸಲಿ: ಜಿ.ಪರಮೇಶ್ವರ್

ಸೋಮವಾರ, 26 ಡಿಸೆಂಬರ್ 2016 (12:48 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ತಾಕತ್ತಿದ್ದರೆ ಭ್ರಷ್ಟ ಸಚಿವರ ಹೆಸರುಗಳನ್ನು ಬಹಿರಂಗಪಡಿಸಲಿ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಸವಾಲ್ ಎಸೆದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲಿಯೇ ರಾಜ್ಯದ ಸಚಿವರು ಹಾಗೂ ಪರಿಷತ್ ಸದಸ್ಯರ ಬಣ್ಣ ಬಯಲಿಗೆಳೆಯುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಬಿಎಸ್‌ವೈಗೆ ತಾಕತ್ತಿದ್ದರೆ ಭ್ರಷ್ಟ ಸಚಿವರ ಹೆಸರುಗಳನ್ನು ಬಹಿರಂಗಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುವುದು ಸರಿಯಲ್ಲ ಎಂದು ಕಿಡಿಕಾರಿದರು. 
 
ಕಾವೇರಿ ನೀರಾವರಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಚಿಕ್ಕರಾಯಪ್ಪ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಯಾರನ್ನು ರಕ್ಷಣೆ ಮಾಡುತ್ತಿಲ್ಲ ಎಂದು ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು. 
 
ಶೀಘ್ರದಲ್ಲಿಯೇ ರಾಜ್ಯದ ಶಾಸಕರು, ಸಚಿವರು ಹಾಗೂ ಪರಿಷತ್ ಸದಸ್ಯರ ಕರ್ಮಕಾಂಡವನ್ನು ಬಯಲಿಗೆಳೆಯುತ್ತೇನೆ. ಈ ಕುರಿತು ನನ್ನ ಬಳಿ ಸೂಕ್ತ ದಾಖಲೆಗಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಾಂಬ್ ಸಿಡಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ