ಡೆಂಘು ಚಿಕಿತ್ಸೆಗೆ ಅಧಿಕ ಶುಲ್ಕ ಪಡೆದರೆ ನಿರ್ಧಾಕ್ಷಿಣ್ಯ ಕ್ರಮ: ಡಾ. ರಜನಿ

ಶನಿವಾರ, 25 ಜುಲೈ 2015 (16:17 IST)
ಜಿಲ್ಲೆಯಲ್ಲಿ ಚಿಕನ್ ಗುನ್ಯಾ ಹಾಗೂ ಡೆಂಘು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲೆಯ ಆರೋಗ್ಯ ಇಲಾಖೆಯ ಡಿಹೆಚ್ಒ ಡಾ.ರಜನಿ ಖಾಸಗಿ ಆಸ್ಪತ್ರೆಗಳೂ ಸೇರಿಂದತೆ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಿಗೆ ಖಡಕ್ಕಾಗಿ ಸೂಚಿಸಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 380 ಹೆಚ್ಚು ಡೆಂಘು ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನಲೆಯಲ್ಲಿ ಸೂಕ್ತ ಚಿಕಿತ್ಸೆ ಅಗತ್ಯವಾಗಿದ್ದು, ಸರ್ಕಾರವೂ ಕೂಡ ಸೂಕ್ತ ಕ್ರಮ ಕೈಗೊಂಡಿದೆ. ಆದರೆ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆಲ ದೂರುಗಳು ಕೇಳಿ ಬರುತ್ತಿದ್ದು, ಚಿಕಿತ್ಸಾ ವೇಳೆಯಲ್ಲಿ ಹೆಚ್ಚು ಶುಲ್ಕ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯಾಧಿಕಾರಿಗಳಿಗೆ ಹಾಗೂ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದು, ಸರ್ಕಾರ ನಿಗದಿಪಡಿಸಿರುವ 500 ರೂಗಳನ್ನು ಮಾತ್ರ ಚಿಕಿತ್ಸಾ ಶುಲ್ಕವನ್ನಾಗಿ ಪಡೆಯಬೇಕು. ನಿಯಮ ಪಾಲಿಸದಂತಹ ಆಸ್ಪತ್ರೆಗಳ ವಿರುದ್ಧ ಸೂಕ್ತ ಹಾಗೂ ಕಠಿಣ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂದರು.  
 
ಇದೇ ವೇಳೆ, ಶುಲ್ಕ ನೀತಿಯನ್ನು ಪಾಲಿಸದ ಹಿನ್ನೆಲೆಯಲ್ಲಿ ನಾವು ಈಗಾಗಲೇ ಕೆಲವು ನಿರ್ಧಾಕ್ಷಿಣ್ಯ ಕ್ರಮಗಳನ್ನು ಕೈಗೊಂಡಿದ್ದು, ನಗರದ ದೇವಯ್ಯ ಪಾರ್ಕ್‌ ಬಳಿ ಇರುವ ರಕ್ಷಾ ಡಯಾಗ್ನೋಸಿಸ್‌ಗೆ ನೋಟಿಸ್ ನೀಡಿದ್ದೇವೆ. ಅಲ್ಲದೆ ನಗರದ ಶ್ರೀರಾಂಪುರದಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಬೀಗಮುದ್ರೆ ಜಡಿದಿದ್ದೇವೆ ಎಂದು ಮಾಹಿತಿ ನೀಡಿದರು. 

ವೆಬ್ದುನಿಯಾವನ್ನು ಓದಿ