ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಅವರ ಬಗ್ಗೆ ಈಗಲೇ ಏನೂ ಮಾತನಾಡಲಾರೆ. 3 ತಿಂಗಳು ನಾನು ಏನೂ ಮಾತನಾಡಲ್ಲ. ಅವರ ಆಡಳಿತವನ್ನು ಕಾದು ನೋಡೋಣ. ಈಗಲೇ ಅವರ ಮೇಲೆ ಸುಮ್ಮನೆ ದೂರುವುದಿಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಆಶಿಸುತ್ತೇನೆ ಎಂದರು.
ಮುಖ್ಯಮಂತ್ರಿ ಬದಲಾದರೆ ಎಲ್ಲವೂ ಬದಲಾಗುತ್ತಾ..? ಯಡಿಯೂರಪ್ಪ ಇಳಿದಿದ್ದಾರೆ. ಬೊಮ್ಮಾಯಿ ಸಿಎಂ ಆಗಿದ್ದಾರೆ ಎಂದ ಮಾತ್ರಕ್ಕೆ ಬಿಜೆಪಿಯ ಐಡಿಯಾಲಜಿ ಬದಲಾಗುತ್ತಾ? ಕೋಮುವಾದ ಹೊರಟುಹೋಗುತ್ತಾ? ಹಿಂದುತ್ವದ ಅವರ ಅಜೆಂಡಾ ಬದಲಾಗುತ್ತಾ? ಬಿಜೆಪಿಯವರು ಎಂದಿಗೂ ಅಲ್ಪಸಂಖ್ಯಾತರು, ದಲಿತರು, ಬಡವರ ಪರವಾಗಿ ಇಲ್ಲ. ಆದರಿಂದ ಬಿಜೆಪಿ ಸರ್ಕಾರದಿಂದ ಯಾವುದೇ ನಿರೀಕ್ಷೆ ಮಾಡುವುದಿಲ್ಲ. ಆದರೆ ಬಸವರಾಜ ಬೊಮ್ಮಾಯಿಗೆ ಒಂದು ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಒಳ್ಳೆಯ ಆಡಳಿತ ನೀಡಲಿ ಎಂದು ಸಿದ್ದರಾಮಯ್ಯ ಆಶಿಸಿದರು.