ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಖರ್ಗೆ ಸಿಎಂ

ಬುಧವಾರ, 14 ಜೂನ್ 2017 (15:06 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಮುಖ್ಯಮಂತ್ರಿಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
 
ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆಯವರಿಗೆ ಸಿಎಂ ಪಟ್ಟ ನೀಡಲು ಕಾಂಗ್ರೆಸ್ ಹೈಕಮಾಂಡ್ ಒಲವು ತೋರಿದೆ ಎಂದು ದೆಹಲಿ ಮೂಲಗಳು ತಿಳಿಸಿವೆ.
 
ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ವಿಚಾರ ಗರಿಗೆದರಿದ್ದು ರಾಜ್ಯ ರಾಜಕೀಯದಲ್ಲಿ ಹೊಸ ಕೋಲಾಹಲ ಸೃಷ್ಟಿಸಿದೆ ಎನ್ನಲಾಗಿದೆ. 
 
ಜಿ.ಪರಮೇಶ್ವರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿಸುವಲ್ಲಿ ಖರ್ಗೆ ಪ್ರಮುಖ ಪಾತ್ರವಹಿಸಿದ್ದರಿಂದ ಖರ್ಗೆ ಸಿಎಂ ಆದಲ್ಲಿ ಪರಮೇಶ್ವರ್ ಬೆಂಬಲ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಿಎಂ ಸಿದ್ದರಾಮಯ್ಯ ಕೂಡಾ ಒಲ್ಲದ ಮನಸ್ಸಿನ ಮಧ್ಯೆಯೂ ಮಲ್ಲಿಕಾರ್ಜುನ್ ಖರ್ಗೆ ಮುಖ್ಯಮಂತ್ರಿಯಾಗಲು ಒಪ್ಪಿದ್ದಾರೆ ಎಂದು ಪಕ್ಷದ ಅಂತರಿಕ ಮೂಲಗಳು ತಿಳಿಸಿವೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ