ಹೈಕಮಾಂಡ್‌‍ಗೆ ಕಪ್ಪ: ತಾಕತ್ತಿದ್ರೆ ಕಾಂಗ್ರೆಸ್ಸಿಗರು ಚರ್ಚೆಗೆ ಬರಲಿ ಎಂದ ಬಿಜೆಪಿ ಮುಖಂಡ

ಮಂಗಳವಾರ, 21 ಫೆಬ್ರವರಿ 2017 (18:05 IST)
ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಪಕ್ಷದ ಹೈಕಮಾಂಡ್‌ಗೆ ಕಪ್ಪು ಕಾಣಿಕೆ ಸಲ್ಲಿಸಿರುವ ಆರೋಪದ ಬಗ್ಗೆ ಚರ್ಚೆಗೆ ಬರಲಿ ಎಂದು ಬಿಜೆಪಿ ಮುಖಂಡ ಅರವಿಂದ್ ಲಿಂಬಾವಳಿ ಸವಾಲ್ ಹಾಕಿದ್ದಾರೆ.
 
ಕಾಂಗ್ರೆಸ್ ಪಕ್ಷದ ಮುಖಂಡರು ಹೈಕಮಾಂಡ್‌ಗೆ 1 ಸಾವಿರ ಕೋಟಿ ರೂಪಾಯಿ ಕಪ್ಪ ಕಾಣಿಕೆ ಸಲ್ಲಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ತಾಕತ್ತಿದ್ರೆ ಚರ್ಚೆಗೆ ಬನ್ನಿ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಕಾಂಗ್ರೆಸ್ ಸರಕಾರ ವ್ಯಾಪಕವಾಗಿ ಭ್ರಷ್ಟಾಚಾರದಲ್ಲಿ ತೊಡಗಿದ್ದರಿಂದ ಖುರ್ಚಿಯನ್ನು ಉಳಿಸಿಕೊಳ್ಳಲು ಹೈಕಮಾಂಡ್‌ಗೆ ಕಪ್ಪು ಕಾಣಿಕೆ ಸಲ್ಲಿಸುತ್ತಿದೆ ಎಂದು ಲೇವಡಿ ಮಾಡಿದ್ದಾರೆ.
 
ಬಿಎಸ್‌ವೈ ಚೆಕ್ ಮೂಲಕ ಹಣ ಪಡೆದ ದಾಖಲೆಗಳಿವೆ ನನ್ನ ಬಳಿ ಇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಒಂದು ವೇಳೆ, ದಾಖಲೆಗಳಿದ್ದರೆ ಯಾಕೆ ಬಿಡುಗಡೆಗೊಳಿಸುತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಸಚಿವ ದಿನೇಶ್ ಗುಂಡೂರಾವ್, ಬಿಎಸ್‌ವೈ ಬಗ್ಗೆ ಮನಬಂದಂತೆ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಇಲ್ಲವಾದರೆ ನಿಮ್ಮ ತಲೆ ಕೆಟ್ಟಿದೆ ಎಂದು ಹೇಳಬೇಕಾಗುತ್ತದೆ ಎಂದು ದಿನೇಶ್ ಗುಂಡೂರಾವ್‌ಗೆ ಬಿಜೆಪಿ ಮುಖಂಡ ಅರವಿಂದ್ ಲಿಂಬಾವಳಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ