ದೇವೇಗೌಡರು ತುಮಕೂರು ಕ್ಷೇತ್ರದಲ್ಲಿ ಗೆದ್ದರೆ ಭಾರತಕ್ಕೆ ಇಮ್ರಾನ್ ಖಾನ್ ಪ್ರಧಾನಿಯಾದಂತೆ-ಬಿಜೆಪಿ ಶಾಸಕನಿಂದ ವ್ಯಂಗ್ಯ

ಬುಧವಾರ, 27 ಮಾರ್ಚ್ 2019 (14:05 IST)
ತುಮಕೂರು : ಏಪ್ರಿಲ್ 18 ರಂದು ನಡೆಯಲಿರುವ ಮೊದಲನೇ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ.


ಇದೀಗ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮೈತ್ರಿಕೂಟದ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಹಾಗೇ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದ ಮುದ್ದ ಹನುಮೇಗೌಡ ತಮಗೆ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿಹಾಗೂ  ಜಿ.ಎಸ್. ಬಸವರಾಜು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಬಿಜೆಪಿ ಶಾಸಕ ಜೆ.ಸಿ. ಮಾಧುಸ್ವಾಮಿ, ಕುಟುಂಬ ರಾಜಕಾರಣ ಮಾಡುತ್ತಿರುವ ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆದ್ದರೆ ಭಾರತಕ್ಕೆ ಇಮ್ರಾನ್ ಖಾನ್ ಪ್ರಧಾನಿಯಾದಂತೆ. ಅಲ್ಲದೆ ಮುಂದೆ ಅವರ ಮಕ್ಕಳು ಮೊಮ್ಮಕ್ಕಳು ತುಮಕೂರು ಜಿಲ್ಲೆಯನ್ನು ಪೂರ್ತಿಯಾಗಿ ಆಕ್ರಮಿಸಿಕೊಳ್ಳುತ್ತಾರೆ ಎಂದು ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ