ಈಗ ಚುನಾವಣೆ ನಡೆದ್ರೆ ಕೇವಲ 80 ಸೀಟು ಮಾತ್ರ ಗೆಲ್ಲೋದು: ಅಮಿತ್ ಶಾ

ಭಾನುವಾರ, 13 ಆಗಸ್ಟ್ 2017 (13:22 IST)
ವಿಧಾನಸಭೆ ಚುನಾವಣೆ ಅವಧಿಗಿಂತ ಮುಂಚೆ ನಡೆದಲ್ಲಿ ಬಿಜೆಪಿ ಪಕ್ಷಕ್ಕೆ ಕೇವಲ 80 ಸೀಟುಗಳು ಮಾತ್ರ ಲಭಿಸಲಿವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುಡುಗಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಡುವಿನ ವೈಮನಸ್ಸು ಪರಸ್ಪರ ಆರೋಪ ಪ್ರತ್ಯಾರೋಪಗಳು ಪಕ್ಷದ ಮೇಲೆ ನೇರ ಪರಿಣಾಮ ಬೀರಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಉಭಯ ನಾಯಕರು ಕೂಡಲೇ ತಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ತೊರೆದು ಪಕ್ಷವನ್ನು ಬೇರು ಮಟ್ಟದಿಂದ, ಬೂತ್ ಮಟ್ಟದಿಂದ ಸಂಘಟಿಸಲು ಮುಂದಾಗಬೇಕು. ಭಿನ್ನಾಭಿಪ್ರಾಯಗಳನ್ನು ಹೈಕಮಾಂಡ್ ಬಗೆಹರಿಸಲಿದೆ. ಹೈಕಮಾಂಡ್ ಯಾವತ್ತೂ ಅಶಿಸ್ತು ಸಹಿಸುವುದಿಲ್ಲ. ಅಶಿಸ್ತು ತೋರುವವರ ವಿರುದ್ಧ ಕಠಿಣ ಕ್ರಮ ಖಚಿತ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.
 
ನಾಯಕರಲ್ಲಿನ ಭಿನ್ನಾಭಿಪ್ರಾಯಗಳು ಪಕ್ಷದ ಸೋಲಿಗೆ ಕಾರಣವಾಗುತ್ತವೆ. ಬಿಜೆಪಿಯ ಪ್ರತಿಯೊಬ್ಬ ನಾಯಕರು ಮತ್ತು ಕಾರ್ಯಕರ್ತರು ಒಂದಾಗಿ ಮುಂಬರುವ ವಿಧಾನಸಭೆ ಚುನಾವಣೆಗಾಗಿ ಸಿದ್ದತೆ ನಡೆಸಬೇಕು ಎಂದು ಕರೆ ನೀಡಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ